ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆಯರಿಬ್ಬರಿಗೆ ಗಾಯವಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಗುರುವಾರ ನಡೆದಿದೆ.
ಅನಾರೋಗ್ಯದ ನಿಮಿತ್ತ ಆಟೋದಲ್ಲಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ತೆರಳಿ ಡಾಕ್ಟರ್ ರಿಂದ ಪರೀಕ್ಷೆ ಮಾಡಿಸಿಕೊಂಡು ಮನೆಗೆ ಮರಳಿ ರಿಕ್ಷಾದಲ್ಲಿ ತೆರಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಆಟೋ ಚಾಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯೂರ್ಟನ್ ತೆಗೆದು ಕೊಂಡು ಅರಾಟೆ ಕಡೆಗೆ ಸಾಗುತ್ತಿದ್ದಾಗ ತ್ರಾಸಿ ಕಡೆಯಿಂದ ಅತಿ ವೇಗದಿಂದ ಧಾವಿಸಿ ಬಂದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.ಅಪಘಾತದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಆಟೋ ಚರಂಡಿಗೆ ಉರುಳಿ ಬಿದ್ದಿದೆ.ಆಟೋದಲ್ಲಿದ್ದ ಇಬ್ಬರು ಮಹಿಳೆಯರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ಆಟೋ ರಿಕ್ಷಾ ಹಿಂಭಾಗ ಮತ್ತು ಮುಂಭಾಗ ನಜ್ಜುಗುಜ್ಜಾಗಿದೆ.ರಿಕ್ಷಾ ಅಪಘಾತಕ್ಕೀಡಾಗಿದ್ದರಿಂದ ಆಸ್ಪತ್ರೆಗೆ ತೆರಳಿ ಮನೆಗೆ ವಾಪಸಾಗುತ್ತಿದ್ದವರು ಮರಳಿ ಆಸ್ಪತ್ರೆಗೆ ದಾಖಲಾಗಿದ್ದರೆ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿಗಳು ಆಗಮಿಸಿ ಸ್ಥಳ ಮಹಜರು ನಡೆಸಿದರು.ಅಪಘಾತ ಮಾಡಿ ಪರಾರಿಯಾಗಿದ್ದ ಕಾರ್ ಪತ್ತೆಗೆ ಪೊಲೀಸ್ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಆಟೋದಲ್ಲಿ ಚಾಲಕ ಸಹಿತ ಒಂದು ಮಗು ಸೇರಿ ಒಟ್ಟು ಐವರು ಜನ ಪ್ರಯಾಣಿಸುತ್ತಿದ್ದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…