ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ ಆಚಾರ್ಯ ಮುಳ್ಳಿಕಟ್ಟೆ (57) ಅವರು ತೀವೃ ತರಹದ ಹೃದಯಘಾತದಿಂದ ಶುಕ್ರವಾರ ನಿಧನರಾದರು.ಅಂಬಾದೇವಿ ಯಕ್ಷಗಾನ ಕಲಾಸಂಘ ಗಾಣದಮಕ್ಕಿ ಅದರ ಸಕ್ರೀಯ ಕಲಾವಿದರಾಗಿರುವ ರವೀಂದ್ರ ಆಚಾರ್ಯ ಅವರು ಹಲವಾರು ಪ್ರಸಂಗಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು.ಯಕ್ಷಗಾನ ಪ್ರದರ್ಶನವನ್ನು ನಿರಂತರವಾಗಿ ಸಂಘಟಿಸುತ್ತಾ ಬಂದಿರುವ ಅವರು ಬಡಗು ಮತ್ತು ತೆಂಕು ತಿಟ್ಟಿನ ಮೇಳದಲ್ಲಿ ತಮ್ಮದೆ ರೀತಿಯ ಸ್ನೇಹ ಬಳಗವನ್ನು ಹೊಂದಿದ್ದರು.ವಿಶ್ವಕರ್ಮ ಸಹಕಾರಿ ಸಂಘದ ನಿರ್ದೇಶಕರಾಗಿ,ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು.ಅವರಿಗೆ ಪತ್ನಿ,ಓರ್ವ ಪುತ್ರ,ಓರ್ವ ಪುತ್ರಿ ಇದ್ದಾರೆ.ಕಲಾವಿದನ ಅಕಾಲಿಕ ಮರಣಕ್ಕೆ ಯಕ್ಷರಂಗ ಸಂತಾಪವನ್ನು ಸೂಚಿಸಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…