ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರಿಗೆ ಅಂತರಾಷ್ಟ್ರೀಯ ಐಕಾನಿಕ್ ಪ್ರಶಸ್ತಿ

ಕುಂದಾಪುರ:ಶಿಕ್ಷಣ ಕ್ಷೇತ್ರದಲ್ಲಿ ವಿಶೇಷವಾದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರರವರು ಅವರು ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆಯವರು ಕೊಡಮಾಡುವ
ಅಂತರಾಷ್ಟ್ರೀಯ ಮಟ್ಟದ ಐಕಾನಿಕ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನವೆಂಬರ್ 28 ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.





















































































































































































































































































































































































































































































































































































































































































































































































































































































































































































































































































































































































































































































































































































































































































