ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯಲ್ಲಿ ವೈಭವದ ಕ್ರೀಡಾ ಕೂಟ ಉದ್ಘಾಟನೆ




ಕುಂದಾಪುರ:ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಅದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.
ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರು” ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ.ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ.ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ.ಅವೆರಡನ್ನೂ ಸಮಾನವಾಗಿ ಸ್ವೀಕರಿಸಿ ನಿರಂತರ ಪ್ರಯತ್ನ ಮಾಡಬೇಕು.ಕ್ರೀಡಾ ಕ್ಷೇತ್ರದಲ್ಲಿ ಅಸಕ್ತಿಯುಳ್ಳ ಮಕ್ಕಳಿಗೆ ಹಿಮಾಲಯ ಪರ್ವತ ಏರಿದ ತೇನ್ ಸಿಂಗ್ ಮಾದರಿಯಾಗಬೇಕು.ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕ್ರೀಡಾ ವಿಭಾಗದಲ್ಲಿ ಹೆಚ್ಚಿನ ಸಾಧನೆ ಮಾಡುವಂತಾಗಬೇಕು.ಡಾ.ರಮೇಶ್ ಶೆಟ್ಟಿ ಯವರ ಸಮರ್ಥವಾದ ನೇತೃತ್ವದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು,ಸಂಸ್ಥೆ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದಲ್ಲಿ ಪ್ರಸಿದ್ಧಿ ಪಡೆಯಲಿ “ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಂತಾರಾಷ್ಟ್ರೀಯ ಕ್ರೀಡಾ ಪಟು ಗುರುರಾಜ ಪೂಜಾರಿ ಮಾತನಾಡುತ್ತ” ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸು ಕಾಣಬೇಕಾದರೆ ಸ್ಪಷ್ಟವಾದ ಗುರಿ ಮತ್ತು ಕಠಿಣ ಅಭ್ಯಾಸ ಅತ್ಯಗತ್ಯ.ನಿರಂತರವಾದ ಅಭ್ಯಾಸ ಮತ್ತು ಉತ್ತಮವಾದ ತರಬೇತಿಯಿಂದ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಲು ಸಾಧ್ಯ.ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸರಕಾರಿ ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯವಿದ್ದು
ಸಾಧಕ ಪ್ರತಿಭೆಗಳಿಗೆ ಉತ್ತಮ ಅವಕಾಶವಿದೆ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಮಾತನಾಡಿ” ಇತ್ತೀಚಿನ ವರ್ಷಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಸಾಧನೆ ಗಮನೀಯವಾಗಿದೆ.ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಅತ್ಯುತ್ತಮವಾದ ತರಬೇತಿ ಕೇಂದ್ರದ ಅಗತ್ಯವಿದೆ.ಮಕ್ಕಳಿಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿಯೇ ಉತ್ತಮ ತರಬೇತಿ ದೊರೆತರೆ ಕ್ರೀಡಾ ತಾರೆಗಳಾಗಲು ಸಾಧ್ಯವಾಗುತ್ತದೆ “ಎಂದರು. ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕ್ರೀಡಾ ಪಟು ಗುರುರಾಜ ಪೂಜಾರಿಯವರನ್ನು ಸನ್ಮಾನಿಸಲಾಯಿತು.ಕ್ರೀಡಾ ಕೂಟದ ಆರಂಭದಲ್ಲಿ ಮಕ್ಕಳ ಪಥ ಸಂಚಲನ ಬಹಳ ವೈಭವದಿಂದ ಮೂಡಿ ಬಂದಿತು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕ ಶ್ರೀಯುತ ಕುಸುಮಾಕರ ಶೆಟ್ಟಿ,ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ,ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್ ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಉಪಸ್ಥಿತರಿದ್ದರು. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ವಿಜಯಕುಮಾರ್ ಶೆಟ್ಟಿ ನಿರೂಪಿಸಿ, ದೈಹಿಕ ಶಿಕ್ಷಕಿ ಜಯಲತಾ ವಂದಿಸಿದರು.





















































































































































































































































































































































































































































































































































































































































































































































































































































































































































































































































































































































































































































































































































































































































































