ಕುಂದಾಪುರ:ಕೋಡಿ ಬೀಚ್‍ನಲ್ಲಿ ಈಜಲು ತೆರಳಿದ್ದ ಸಿದ್ದಾಪುರ ಸಮೀಪದ ಅಂಪಾರು ಮೂಡುಬಗೆ ನಿವಾಸಿಯಾಗಿರುವ ಧನರಾಜ್ (23) ವರ್ಷ,ದರ್ಶನ್ (18) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಧನುಷ್ (20) ಪ್ರಾಣಾಪಾಯದಿಂದ ಪಾರಾಗಿದ್ದು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಕ್ಷಣೆಗೆ ಒಳಪಟ್ಟ ಯುವಕ ಸಹಿತ,ಮೃತಪಟ್ಟ ಯುವಕರಿಬ್ಬರು ಒಂದೇ ತಾಯಿಯ ಮಕ್ಕಳಾಗಿದ್ದಾರೆ,ಕಂಪನಿಯಲ್ಲಿ ಉದ್ಯೋಗದಲ್ಲಿರುವ ಇವರು ಮಧ್ಯಾಹ್ನ ಸಮಯದಲ್ಲಿ ಕೋಡಿ ಬೀಚ್ಗೆ ತೆರಳಿದ್ದಾರೆ ಎನ್ನಲಾಗಿದೆ.ಶನಿವಾರ ಸಂಜೆ ಕುಟುಂಬ ಸಮೇತರಾಗಿ ಕೋಡಿ ಬೀಚ್ ಗೆ ಬಂದಿದ್ದು ಇವರು ಸಮುದ್ರದಲ್ಲಿ ಸ್ನಾನಕ್ಕೆ ಇಳಿದ ಸಂದರ್ಭ ಕಡಲ ಅಲೆಗೆ ಈ ಮೂವರು ಸಹೋದರರು ಕೊಚ್ಚಿಕೊಂಡು ಹೋಗಿದ್ದು ತಕ್ಷಣ ಸ್ಥಳೀಯರು ಓರ್ವ ನನ್ನು ರಕ್ಷಿಸಿದ್ದಾರೆ.
ಆದರೆ ಇಬ್ಬರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುತ್ತಾರೆ.
ಇಬ್ಬರ ಮೃತದೇಹವನ್ನು ಸ್ಥಳೀಯರು ಸಮುದ್ರದಿಂದ ಮೇಲಕ್ಕೆ ತಂದಿದ್ದಾರೆ.ನಿರಂತರವಾಗಿ ಕೋಡಿ ಬೀಚ್‍ನಲ್ಲಿ ಪ್ರಕರಣಗಳು ಮರುಕಳಿಸುತ್ತಾ ಇದ್ದು.ಜೀವಕ್ಕೆ ಕಂಟಕವಾಗಿರುವ ಕೋಡಿ ಬೀಚ್‍ನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…