ಕುಂದಾಪುರ

ಬೈಂದೂರು:ಕೆಂಪು ಕಲ್ಲು,ಮರಳು ನೀಡುವಂತೆ ಆಗ್ರಹ,ರಾಜಕೀಯ ತಿರುವು ಪಡೆದ ಬೃಹತ್ ಪ್ರತಿಭಟನೆ

Share

ಕುಂದಾಪುರ:ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ,ಕಲ್ಲುಕೋರೆ ಮಾಲೀಕರ ಸಂಘ ಹಾಗೂ ಲಾರಿ ಮಾಲೀಕರ ಸಂಘ ಬೈಂದೂರು ಸಹಭಾಗಿತ್ವದಲ್ಲಿ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲಾಡಳಿತ ಹಾಗೂ ಗಣಿ ಇಲಾಖೆಯ ಅವೈಜ್ಞಾನಿಕ ನಿಯಮಗಳಿಂದಾಗಿ ಕಟ್ಟಡ ನಿರ್ಮಾಣ ಕ್ಷೇತ್ರದ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಾರು ಬಾರಿ ಮೌಖಿಕ ಮನವಿ,‌ ಲಿಖಿತ ಮನವಿ ಸಲ್ಲಿಸಿದರೂ ಜಿಲ್ಲಾಡಳಿತ‌ ಸ್ಪಂದಿಸದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಶಾಸಕ ಗಂಟಿಹೊಳೆ ತಿಳಿಸಿದರು.
ಮನವಿ ಹಂತವನ್ನು ನಾವು ದಾಟಿದ್ದೇವೆ.ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಾದರೆ ಪ್ರತಿಭಟನೆ ಅನಿವಾರ್ಯ.ಜನರ ಸಮಸ್ಯೆಗೆ ಜಿಲ್ಲಾಡಳಿತ ಸ್ಪಂದಿಸಬೇಕು. ಮುಂದಿನ ಹತ್ತು ದಿನಗಳ ಒಳಗಾಗಿ ಗಣಿ ಇಲಾಖೆಯು ತನ್ನ ಅವೈಜ್ಞಾನಿಕ ನಿಯಮಗಳನ್ನು ಹಿಂಪಡೆಯದೇ ಇದ್ದಲ್ಲಿ ಉಡುಪಿ ಜಿಲ್ಲೆ ಕಂಡುಕೇಳರಿಯದ ರೀತಿಯಲ್ಲಿ ಪ್ರತಿಭಟಿಸುತ್ತೇವೆ ಎಂದು ಇದೇ ವೇಳೆ ಶಾಸಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಬೈಂದೂರುನಲ್ಲಿ ಶನಿವಾರ ನಡೆದ ಪ್ರತಿಭಟನೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ರಾಜಕೀಯ ಜಂಟಾಟಕ್ಕೆ ಕಾರಣವಾಗಿದೆ.ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೈಗೊಂಡ ಪ್ರತಿಭಟನೆ ರಾಜಕೀಯ ತಿರುವು ಪಡೆದುಕೊಂಡಿರುವುದು ವಿಪರ್ಯಾಸವಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago