ಕುಂದಾಪುರ:ಮಕ್ಕಳನ್ನು ಎಷ್ಟು ಓದಿಸಿದರು ಕೆಲಸ ಎಲ್ಲಾ ಎನ್ನುವಂತಹ ಪರಿಸ್ಥಿತಿಗೆ ಬಂದು ಬಿಟ್ಟಿದೆ.ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗುತ್ತಿರುವುದು ದೇಶದ ಆಥಿಕ ಬೆಳವಣಿಗೆ ಆತಂಕಕಾರಿ ವಿಷಯವಾಗಿದ್ದು..ತಮ್ಮ ಮಕ್ಕಳು ವಿದ್ಯಾವಂತರಾಗಿ ಒಳ್ಳೆ ಕೆಲಸ ಹಿಡಿದು ಕೈ ತುಂಬ ಸಂಬಳ ಪಡೆಯ ಬೇಕ್ಕೆನ್ನುವ ಹೆತ್ತವರ ಆಸೆಗಳನ್ನು ನಿರುದ್ಯೋಗ ಸಮಸ್ಯೆ ಎನ್ನುವ ಭೂತ ನುಂಗಿಕೊಂಡಿದೆ.ಬೆಲೆ ಏರಿಕೆ ಬಡ ಮತ್ತು ಮಧ್ಯಮ ವರ್ಗದ ಜರನ್ನು ಕಾಡುತ್ತಿದ್ದು.ದೇಶದ ಸಂಪತ್ತನ್ನು ಕೆಲವೆ ಕೆಲವು ವ್ಯಕ್ತಿಗಳು ಲೂಟಿ ಮಾಡುತ್ತಿದ್ದಾರೆ.ಸರಕಾರದ ಅಸಮರ್ಪಕ ನಿಲುವುಗಳ ವಿರುದ್ಧ ನಿರಂತರವಾಗಿ ಹೋರಾಟ ಮಾಡಬೇಕಾಗಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಪ್ರಕಾಶ್ ಕೆ ಹೇಳಿದರು.
ಬೈಂದೂರು ತಾಲೂಕಿನ ನಾಡಗುಡ್ಡೆಯಂಗಡಿಯಲ್ಲಿ ಭಾನುವಾರ ನಡೆದ ಸಿಪಿಐ(ಎಂ) ನ 8ನೇ ಉಡುಪಿ ಜಿಲ್ಲಾ ಸಮ್ಮೇಳನವನ್ನುದ್ದೇಶಿಸಿ ಅವರು ಮಾತನಾಡಿದರು.
ಯಾದವ ಶೆಟ್ಟಿ ಅವರು ಮುಖ್ಯ ಭಾಷಣವನ್ನು ನೆರವೇರಿಸಿದರು.
ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ನೂತನವಾಗಿ ಆಯ್ಕೆಗೊಂಡಿರುವ ಜಿಲ್ಲಾ ಕಾರ್ಯದರ್ಶಿ ಸುರೇಶ ಕಲ್ಲೇಗಾರ,ಕಾರ್ಮಿಕ ಮುಖಂಡ ರಾಜೀವ ಪಡುಕೋಣೆ,ನಾಗರತ್ನ ನಾಡ,ಶ್ರೀಧರ ಗೊಲ್ಲ,ಕೆ.ಶಂಕರ,ಎಚ್ ನರಸಿಂಹ ಉಪಸ್ಥಿತರಿದ್ದರು.ಪಿಲೀಫ್ ಡಿಸೋಜ ಸ್ವಾಗತಿಸಿದರು.ಶ್ರೀಧರ ನಾಡ ನಿರೂಪಿಸಿದರು.ಪಡುಕೋಣೆ ಯಿಂದ ನಾಡ ಗುಡ್ಡೆಯಂಗಡಿ ತನಕ ಬೃಹತ್ ಮೆರವಣಿಗೆ ನಡೆಯಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…