ಪ್ರಮುಖ

ಸಮುದ್ರದಲ್ಲಿ ನಾಪತ್ತೆಯಾಗಿರುವ ರೋಹಿದಾಸ್ ಶವವಾಗಿ ಪತ್ತೆ

Share

ಕುಂದಾಪುರ:ತ್ರಾಸಿ ಬೀಚ್‍ನಲ್ಲಿ ಜೆಸ್ಕಿ ರೈಡ್ ಮೂಲಕ ರೈಡ್ ಮಾಡುತ್ತಿದ್ದ ಸಂದರ್ಭದಲ್ಲಿ ಜೆಸ್ಕಿ ರೈಡ್ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಮಗುಚಿ ಬಿದ್ದ ಪರಿಣಾಮ ಜೆಸ್ಕಿ ರೈಡ್ ಡ್ರೈವರ್ ರೋಹಿದಾಸ್ (41) ಅವರು ನೀರಿನಲ್ಲಿ ಮುಳುಗಿ ಸಮದ್ರದಲ್ಲಿ ಶನಿವಾರ ನಾಪತ್ತೆಯಾಗಿದ್ದರು.ಅವರ ಶವ ತ್ರಾಸಿ ಹೊಸಪೇಟೆ ಬಳಿ ಸಮುದ್ರ ತೀರದಲ್ಲಿ ಸೋಮವಾರ ಪತ್ತೆಯಾಗಿದೆ.
ಶಾಸ ಖಾರ್ವಿ ಹಾಗೂ ಮೋಹನ ಖಾರ್ವಿ ಎಂಬುವವರು ಡಿ.23 ರಂದು ಸೋಮವಾರ ಬೆಳಿಗ್ಗೆ 3 ಗಂಟೆ ಸುಮಾರಿಗೆ ಹೊಸಪೇಟೆ ಬಳಿ ಮೀನುಗಾರಿಕೆಗೆ ತೆರಳಲು ಹೋಗುತ್ತಿದ್ದಾಗ ಸಮುದ್ರ ತೀರದಲ್ಲಿ ಶವ ತೇಲುತ್ತಿರುವುದು ಕಂಡು ಬಂದಿದೆ.ಮೀನುಗಾರರು ತಕ್ಷಣ ಕರಾವಳಿ ಕಾವಲು ಪಡೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.ಕೆಎನ್‍ಡಿ ಸಿಬ್ಬಂದಿ ನಿಶಾಂತ್ ಖಾರ್ವಿ ಮತ್ತು ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ ಹಾಗೂ ಮೃತರ ಸಹೋದ್ಯೋಗಿಗಳು ಶವವನ್ನು ಸಮುದ್ರ ತೀರದಿಂದ ಮೇಲಕ್ಕೆ ತಂದು ಗಂಗೊಳ್ಳಿ ಪೆÇಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಿದ್ದರು.ಗಂಗೊಳ್ಳಿ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago