ಕುಂದಾಪುರ:ಅಧಿಕಾರ ಸ್ವೀಕಾರದ ವೇಳೆ ಪಂಚಾಯಿತಿ ಕಟ್ಟಡದ ಒಳಗಡೆ ಅನಧಿಕೃತವಾಗಿ ನಮಾಜ್ ಮಾಡಿರುವುದು ಅತ್ಯಂತ ಕಳವಳಕಾರಿ ಸಂಗತಿ ಆಗಿದ್ದು.ಅಧಿಕಾರಕ್ಕಾಗಿ ಸಮಾಜದ ಸ್ವಾಸ್ತ್ಯವನ್ನು ಕೇಡಿಸುವಂತ ಕಾರ್ಯಗಳಿಗೆ ಮುಂದಾಗಿರುವುದು ಸರಿ ಅಲ್ಲಾ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧಿಕಾರ ಸ್ವೀಕಾರ ವೇಳೆಯಲ್ಲಿ ಮುಸ್ಲಿಂ ಸಮುದಾಯದ ಮೌಲಿಯಿಂದ ಪಂಚಾಯಿತಿ ಒಳಗಡೆ ಪ್ರಾರ್ಥನೆ ಮಾಡಿರುವುದನ್ನು ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿ ಗಂಗೊಳ್ಳಿ ವತಿಯಿಂದ ಶುಕ್ರವಾರ ಗಂಗೊಳ್ಳಿ ಪಂಚಾಯಿತಿ ಎದುರುಗಡೆ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಬೈಂದೂರು ಬಿಜೆಪಿ ಮಂಡಳ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ,ಮಾಜಿ ತಾ.ಪಂ ಸದಸ್ಯ ಸುರೇಂದ್ರ ಖಾರ್ವಿ,ರವಿ ಹೊಸಪೇಟೆ,ನಾಗರಾಜ ಖಾರ್ವಿ ದಾಕುಹಿತ್ಲು,ಚಂದ್ರ ಖಾರ್ವಿ ಲೈಟ್‍ಹೌಸ್,ಗುರು ದಾಕುಹಿತ್ಲು,ವಾಸುದೇವ ಗಂಗೊಳ್ಳಿ,ಸದಾಶಿವ ಕಂಚುಗೋಡು,ಉಮಾನಾಥ ದೇವಾಡಿಗ ಉಪಸ್ಥಿತರಿದ್ದರು.ಹೆಚ್ಚಿನ ತನಿಖೆ ನಡೆಸುವಂತೆ ಗಂಗೊಳ್ಳಿ ಪಂಚಾಯಿತಿ ಪಿಡಿಒ ಹಾಗೂ ಕುಂದಾಪುರ ತಹಶೀಲ್ದಾರ್‍ಗೆ ಮನವಿಯನ್ನು ನೀಡಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…