ಸಮುದ್ರದಲ್ಲಿ ನಾಪತ್ತೆ ಯಾಗಿರುವ ಮೀನುಗಾರನ ಪತ್ತೆಗೆ ತೀವೃವಾದ ಹುಡುಕಾಟ

ಕುಂದಾಪುರ:ಸರ್ವಮಂಗಲೇ ಮೀನುಗಾರಿಕಾ ಪರ್ಷಿನ್ ಬೋಟ್‍ನಲ್ಲಿ ಜನವರಿ.02 ರಂದು ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಮೀನುಗಾರ ನಾರಾಯಣ ಮೊಗವೀರ (59) ಅವರ ಸುಳಿವು ಇನ್ನೂ ಕೂಡ ಪತ್ತೆಯಾಗಿಲ್ಲ.
ಸಮುದ್ರದಲ್ಲಿ ನಾಪತ್ತೆಯಾಗಿರುವ ತಮ್ಮ ಸಹೋದರನನ್ನು ಹುಡುಕಲು ಜಿಲ್ಲಾಡಳಿತ ಸಹಕಾರ ನೀಡಬೇಕೆಂದು ವಿಶ್ವನಾಥ ಗಂಗೊಳ್ಳಿ ಮನವಿ ಮಾಡಿದ್ದಾರೆ.
ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ನಿವಾಸಿ ನಾರಾಯಣ ಮೊಗವೀರ ಅವರು ತಮ್ಮ ಹೊಟ್ಟೆ ಪಾಡಿಗೆಂದು ಜನವರಿ.02 ರಂದು ಪರ್ಷಿನ್ ಬೋಟ್ ಮೂಲಕ ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ದುರಾದೃಷ್ಟ ವಶಾತ್ ನಾರಾಯಣ ಮೊಗವೀರ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ.
ಜನವರಿ.07 ರ ತನಕವೂ ಅವರ ಸುಳಿವು ಸಿಗದೆ ಇರುವುದರಿಂದ ಕುಟುಂಬ ಕಂಗಾಲಾಗಿದೆ.ಮುಳುಗು ತಜ್ಞ ದಿನೇಶ್ ಖಾರ್ವಿ ತಂಡ ಮತ್ತು ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೆÇಲೀಸ್‍ರ ಸಹಕಾರ ದಿಂದ ಹಾಗೂ ಖಾಸಾಗಿ ಬೋಟ್ ಸಹಾಯದಿಂದ ಕಳೆದ ಆರು ದಿನಗಳಿಂದ ಸಮುದ್ರದಲ್ಲಿ ಹುಡುಕಾಟ ಮಾಡಿದ್ದರು ಮೀನುಗಾರ ನಾರಾಯಣ ಮೊಗವೀರ ಸುಳಿವು ಇಲ್ಲಿ ತನಕ ಸಿಕ್ಕಿಲ್ಲ.ಖಾಸಗಿ ಬೋಟ್‍ಗೆ ಡಿಸೇಲ್ ತುಂಬಿಸಿಕೊಂಡು ಸಮುದ್ರದಲ್ಲಿ ಹುಡುಕಾಟ ಮಾಡಲು ದಿನವೊಂದಕ್ಕೆ ಕನಿಷ್ಠ ಪಕ್ಷ 30 ಸಾವಿರ.ರೂ ತಗಲುತ್ತಿದೆ.ಬಡ ಮೀನುಗಾರ ಕುಟುಂಬ ಕಂಗಾಲಾಗಿದೆ.ತಮ್ಮ ಕುಟುಂಬದ ಸದಸ್ಯನನ್ನು ಹುಡುಕಲು ಜಿಲ್ಲಾಡಳಿತ ಹಾಗೂ ಸಂಘ ಸಂಸ್ಥೆಗಳು ಸಹಕಾರ ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.