ಕುಂದಾಪುರ

ಸಮುದ್ರದಲ್ಲಿ ನಾಪತ್ತೆ ಯಾಗಿರುವ ಮೀನುಗಾರನ ಪತ್ತೆಗೆ ತೀವೃವಾದ ಹುಡುಕಾಟ

Share

ಕುಂದಾಪುರ:ಸರ್ವಮಂಗಲೇ ಮೀನುಗಾರಿಕಾ ಪರ್ಷಿನ್ ಬೋಟ್‍ನಲ್ಲಿ ಜನವರಿ.02 ರಂದು ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಮೀನುಗಾರ ನಾರಾಯಣ ಮೊಗವೀರ (59) ಅವರ ಸುಳಿವು ಇನ್ನೂ ಕೂಡ ಪತ್ತೆಯಾಗಿಲ್ಲ.
ಸಮುದ್ರದಲ್ಲಿ ನಾಪತ್ತೆಯಾಗಿರುವ ತಮ್ಮ ಸಹೋದರನನ್ನು ಹುಡುಕಲು ಜಿಲ್ಲಾಡಳಿತ ಸಹಕಾರ ನೀಡಬೇಕೆಂದು ವಿಶ್ವನಾಥ ಗಂಗೊಳ್ಳಿ ಮನವಿ ಮಾಡಿದ್ದಾರೆ.
ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ನಿವಾಸಿ ನಾರಾಯಣ ಮೊಗವೀರ ಅವರು ತಮ್ಮ ಹೊಟ್ಟೆ ಪಾಡಿಗೆಂದು ಜನವರಿ.02 ರಂದು ಪರ್ಷಿನ್ ಬೋಟ್ ಮೂಲಕ ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ದುರಾದೃಷ್ಟ ವಶಾತ್ ನಾರಾಯಣ ಮೊಗವೀರ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ.
ಜನವರಿ.07 ರ ತನಕವೂ ಅವರ ಸುಳಿವು ಸಿಗದೆ ಇರುವುದರಿಂದ ಕುಟುಂಬ ಕಂಗಾಲಾಗಿದೆ.ಮುಳುಗು ತಜ್ಞ ದಿನೇಶ್ ಖಾರ್ವಿ ತಂಡ ಮತ್ತು ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೆÇಲೀಸ್‍ರ ಸಹಕಾರ ದಿಂದ ಹಾಗೂ ಖಾಸಾಗಿ ಬೋಟ್ ಸಹಾಯದಿಂದ ಕಳೆದ ಆರು ದಿನಗಳಿಂದ ಸಮುದ್ರದಲ್ಲಿ ಹುಡುಕಾಟ ಮಾಡಿದ್ದರು ಮೀನುಗಾರ ನಾರಾಯಣ ಮೊಗವೀರ ಸುಳಿವು ಇಲ್ಲಿ ತನಕ ಸಿಕ್ಕಿಲ್ಲ.ಖಾಸಗಿ ಬೋಟ್‍ಗೆ ಡಿಸೇಲ್ ತುಂಬಿಸಿಕೊಂಡು ಸಮುದ್ರದಲ್ಲಿ ಹುಡುಕಾಟ ಮಾಡಲು ದಿನವೊಂದಕ್ಕೆ ಕನಿಷ್ಠ ಪಕ್ಷ 30 ಸಾವಿರ.ರೂ ತಗಲುತ್ತಿದೆ.ಬಡ ಮೀನುಗಾರ ಕುಟುಂಬ ಕಂಗಾಲಾಗಿದೆ.ತಮ್ಮ ಕುಟುಂಬದ ಸದಸ್ಯನನ್ನು ಹುಡುಕಲು ಜಿಲ್ಲಾಡಳಿತ ಹಾಗೂ ಸಂಘ ಸಂಸ್ಥೆಗಳು ಸಹಕಾರ ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago