ಕುಂದಾಪುರ:ಮರವಂತೆಯಲ್ಲಿ ಕಳೆದ ಎಂಟು ವರ್ಷಗಳಿಂದ ಬ್ರೆಕ್ ವಾಟರ್ ಕೆಲಸ ಸಿಆರ್‍ಝಡ್ ನಿಮಯ ಹಾಗೂ ಬೇರೆ ಬೇರೆ ಕಾರಣಗಳಿಂದ ನೆನೆಗುದ್ದಿಗೆ ಬಿದ್ದಿದ್ದು.ನಿಂತು ಹೋಗುವ ಸ್ಥಿತಿಯಲ್ಲಿದ್ದ ಕಾಮಗಾರಿಗೆ ಮರು ಜೀವ ನೀಡುವ ಕೆಲಸ ಮಾಡಲಾಗಿದೆ.ಸುಮಾರು 80 ಕೋಟಿ.ರೂ ವೆಚ್ಚದಲ್ಲಿ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸ ಕೂಡಲೆ ಆರಂಭಗೊಳ್ಳಲಿದ್ದು.ಪೂರ್ತಿ ಹಣ ರಾಜ್ಯ ಸರಕಾರವೆ ಭರಿಸಲಿದೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ.ಎಸ್ ವೈದ್ಯ ಹೇಳಿದರು.
ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ಮಂಗಳವಾರ ಮರವಂತೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಸರಕಾರ ಆಡಳಿತಕ್ಕೆ ಬಂದ ನಂತರ ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿರುವ ಕಾಮಗಾರಿಗಳನ್ನು ಕೈಬೀಡುವ ನಿರ್ಧಾರ ತೆಗೆದುಕೊಂಡಿದ್ದರು.ಮೀನುಗಾರಿಕೆ ಇಲಾಖೆಯಲ್ಲಿನ ಯಾವುದೆ ಕಾಮಗಾರಿಗಳನ್ನು ಹಿಂದಕ್ಕೆ ತೆಗೆದುಕೊಳ್ಳಲು ಬೀಡದೆ ಇದ್ದಿದ್ದರಿಂದ ಮರವಂತೆ ಬಂದರಿನ ಎರಡನೇ ಹಂತದ ಕಾಮಗಾರಿಗೆ ಚಾಲನೆಯನ್ನು ನೀಡಲು ಸಾಧ್ಯವಾಗಿದೆ.ಜ.20 ರ ಒಳಗೆ ಬಂದರು ಕಾಮಗಾರಿಯನ್ನು ಆರಂಭಿಸದೆ ಇದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸೂಚಿಸಲಾಗುವುದು ಎಂದು ಎಚ್ಚರಿಸಿದರು.ಬಂದರಿನ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ಮೀನುಗಾರರು ಈಗಾಗಲೇ ಮನವಿಯನ್ನು ನೀಡಿದ್ದು ಅದಕ್ಕೆ ಪೂರಕವಾಗಿ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ನೋಡಿಕೊಂಡು ಮುಂದಿನ ಕೆಲಸವನ್ನು ಮಾಡಿಕೊಡಲಾಗುವುದು.ಯಾವುದೆ ಕಾರಣಕ್ಕೂ ಮೀನುಗಾರರಿಗೆ ತೊಂದರೆ ಆಗಲು ಬೀಡುವುದಿಲ್ಲ ಎಂದರು.
ಸಿಆರ್‍ಝಡ್ ಸರಳೀಕರಣ
ಕಾರವಾರದ ದಿಂದ ಮಂಗಳೂರು ತನಕ 320 ಕಿ.ಮೀ ಕರಾವಳಿ ತೀರದಲ್ಲಿ ಸಿಆರ್‍ಝಡ್ ಕ್ಲಿಯರೆನ್ಸ್ ಮಾಡಲಾಗಿದೆ.ಮುಂದಿನ ದಿನಗಳಲ್ಲಿ ಯಾವುದೆ ರೀತಿಯ ಅಡ್ಡಿ ಆತಂಕವಿಲ್ಲದೆ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಲು ಅನುಕೂಲವಾಗಲಿದೆ.ಮೀನುಗಾರಿಕಾ ವಲಯಕ್ಕೆ ಆರ್ಥಿಕ ಕೊರತೆ ಆಗಬಾರದು ಎನ್ನುವ ಉದ್ದೆಶದಿಂದ ಗಂಗೊಳ್ಳಿ ಬಂದರು ಅಭಿವೃದ್ಧಿಗೆ ಕ್ಯಾಬಿನೆಟ್‍ನಲ್ಲಿ 22 ಕೋಟಿ.ರೂ ಮಂಜೂರಾತಿ ನೀಡಲಾಗಿದ್ದು ಕೆಲಸ ಆರಂಭಗೊಳ್ಳಲಿದೆ.ಹಲವಾರು ವರ್ಷಗಳಿಂದ ಬೇಡಿಕೆಯಲ್ಲಿದ್ದ ಸೀ ಆಂಬ್ಯುಲೆನ್ಸ್‍ಗೆ ಟೆಂಡರ್ ಕೂಡ ಕರೆಯಲಾಗಿದೆ.ಕೇಂದ್ರ ಸರಕಾರ ಸೀಮೆಎಣ್ಣೆ ಮೇಲೆ 18% ಜಿಎಸ್‍ಟಿ ವಿಧಿಸಿದ್ದರಿಂದ ದರ ಏರಿಕೆ ಕಂಡಿದ್ದು.ನಮ್ಮ ಸರಕಾರದ ವತಿಯಿಂದ ಬೇಕಾದಷ್ಟು ಸೀಮೆ ಎಣ್ಣೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರಕಾರ ಏಕರೂಪ ಕಾನೂನು ರೂಪಿಸಲಿ
ಬುಲ್‍ಟ್ರಾಲ್ ಫಿಶಿಂಗ್ ಈಗಾಗಲೇ ನಿಷೇಧಗೊಂಡಿದ್ದು ಲೈಟ್ ಫಿಶಿಂಗ್ ನಿಷೇಧಕ್ಕೆ ಕೇಂದ್ರ ಸರಕಾರ ಏಕರೂಪ ಕಾನೂನನ್ನು ಜಾರಿಗೆ ತರಬೇಕು. ಗೋವಾ ಕೇರಳ ಮಹಾರಾಷ್ಟ್ರಗಳಿಂದ ಸಾವಿರಾರು ಬೋಟ್‍ಗಳು ಮೀನುಗಾರಿಕೆಯಲ್ಲಿ ತೊಡಗಿಕೊಳ್ಳುವುದರಿಂದ ನಿಷೇಧಕ್ಕೆ ಕಷ್ಟ ಸಾಧ್ಯವಾಗಿದ್ದು ಕೇಂದ್ರ ಸರಕಾರದ ಮಟ್ಟದಲ್ಲಿ ಕ್ರಮಕ್ಕೆ ಮುಂದಾಗಬೇಕೆಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಮರವಂತೆ ಬಂದರು ಅಭಿವೃದ್ಧಿ ಸಹಿತ ಕೊಡೇರಿ,ಗಂಗೊಳ್ಳಿ,ಅಳ್ವೆಗದ್ದೆ ಬಂದರು ಅಭಿವೃದ್ಧಿಗೆ ಬಜೆಟ್‍ನಲ್ಲಿ ಅನುದಾನ ಘೋಷಣೆ ಮಾಡುವಲ್ಲಿ ಶ್ರಮಿಸಬೇಕು ಎಂದು ಸಚಿವರಲ್ಲಿ ವಿನಂತಿಸಿದರು.
ಅಧ್ಯಕ್ಷತೆ ವಹಿಸಿದ ಬೈಂದೂರು ಕ್ಷೇತ್ರದ ಗುರುರಾಜ ಗಂಟಿಹೊಳೆ ಮಾತನಾಡಿ,ಯಾವುದೆ ಸರಕಾರಗಳು ಬಂದರು ಕೂಡ ಮೀನುಗಾರಿಕಾ ಕ್ಷೇತ್ರದ ಕೆಲಸಗಳು ವಿಳಂಭವಾಗುತ್ತದೆ.ಅಂತಹ ಸನ್ನಿವೇಶ ಎದುರಾಗದಂತೆ ಅಭಿವೃದ್ಧಿ ಕಾರ್ಯಗಳು ಚುರುಕಿನಿಂದ ನಡೆಯುವುದರಿಂದ ಮೀನುಗಾರರಿಗೆ ಒಳಿತಾಗಲಿದೆ.ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಲು ಸಚಿವರು ಚಿಂತನೆ ಮಾಡಬೇಕು ಎಂದು ಹೇಳಿದರು.ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಸಂಸದರ ಕೊಡುಗೆ ಅಪಾರವಾದದ್ದು ಎಂದರು.
ಮರವಂತೆ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಖಾರ್ವಿ,ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮರವಂತೆ ಅಧ್ಯಕ್ಷ ಸುರೇಶ್ ಖಾರ್ವಿ,ಮಾರ್ಕೆಟ್ ಸಮಿತಿ ಅಧ್ಯಕ್ಷ ವೆಂಕಟರಮಣ ಖಾರ್ವಿ,ಸತೀಶ್ ಎಂ ನಾಯಕ್,ಎಡಿ ಸುಮಲತಾ ಉಪಸ್ಥಿತರಿದ್ದರು.ಶ್ರೀಧರ ಖಾರ್ವಿ ನಿರೂಪಿಸಿ,ವಂದಿಸಿದರು.ಬಂದರಿನ ಎರಡನೇ ಹಂತದ ಕಾಮಗಾರಿ ಅಂಗವಾಗಿ ಗಣಹೋಮ ನಡೆಯಿತು.
ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…
ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…
ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…