ಕುಂದಾಪುರ:ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ಪ್ರತಿಭಾ ಸಿಂಚನ-2 ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಶುಭ ಹಾರೈಸಿದರು.ರಾಜೀವ್ ಶೆಟ್ಟಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಉದ್ಘಾಟಿಸಿದರು.ದಾನಿಗಳಾದ ಅಶೋಕ್ ಶೆಟ್ಟಿ ಬೆಳ್ಳಾಡಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿ,ಶಾಲಾ ಕಟ್ಟಡವನ್ನು ಹೊಸದಾಗಿ ನಿರ್ಮಿಸುವುದರ ಕುರಿತು ಭರವಸೆ ನೀಡುವುದರೊಂದಿಗೆ ತಾವು ಕಲಿತ ಶಾಲೆಗೆ ಜೊತೆ ಸದಾ ಬೆಂಗಾವಲಾಗಿ ನಿಲ್ಲುತ್ತೇನೆ ಎನ್ನುವ ವಿಶ್ವಾಸ ನುಡಿಯನ್ನಾಡಿದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ಅವರ ಶಾಲೆಯ ಕುರಿತಾದ ನಿರಂತರ ಹೋರಾಟದ ಫಲವನ್ನು ಶ್ಲಾಘಿಸಿದರು.ಇನ್ನು ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಗಳಾದ ಸುರೇಂದ್ರ ಇವರು ಮಾತನಾಡಿ ಸರಕಾರಿ ಶಾಲೆ ಇಷ್ಟೊಂದು ಅಭಿವೃದ್ಧಿಗೊಂಡಿರುವ ಕುರಿತು ಹೆಮ್ಮೆ ವ್ಯಕ್ತಪಡಿಸಿ ಅದಕ್ಕೆ ಕಾರಣೀಭೂತರಾದ ಶಾಲಾ ಶಿಕ್ಷಕರಾದ ನಾಗರಾಜ್ ಶೆಟ್ಟಿ ಹಾಗೂ ಎಸ್ ಡಿಂಎಸಿ ಅಧ್ಯಕ್ಷ ಚಂದ್ರಶೇಖರ್ ಆಚಾರ್ಯ ಇವರೀರ್ವರ ಕಠಿಣ ಪರಿಶ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲಾ ಮುಖ್ಯೋಪಾಧ್ಯಾಯರ ಅಶ್ವಿನಿ ಹೆಬ್ಬಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ನಾಡ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಪಾರ್ವತಿ ಪ್ರಭಾಕರ್ ಶೆಟ್ಟಿ ಇವರು ಕಂಪ್ಯೂಟರ್ ಕೊಠಡಿಯನ್ನು ಉದ್ಘಾಟಿಸಿದರು.ಈ ಸಭೆಯಲ್ಲಿ ಶಶಿಧರ್ ಶೆಟ್ಟಿ ಸಾಲ್ಗದ್ದೆ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ,ಶಿಕ್ಷಣ ಸಂಯೋಜಕರಾದ ಯೋಗೀಶ್ , ಸುನಿಲ್ ಶೆಟ್ಟಿ ,ದಿನೇಶ್ ಕೆ, SDMC ಅಧ್ಯಕ್ಷರಾದ ಚಂದ್ರಶೇಖರ್ ಆಚಾರ್ಯ , ಅಶ್ವಿನಿ ಹೆಬ್ಬಾರ್ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು ವಿಜೇತರ ಪಟ್ಟಿಯನ್ನು ಅತಿಥಿ ಶಿಕ್ಷಕರಾದ ಕುಮರಿ ಅಂಕಿತಾ ಪೂಜಾರಿ ವಾಚಿಸಿದರು
ನಂತರ ಶಾಲಾ ಮಕ್ಕಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಶಿಕ್ಷಕರಾದ ನಾಗರಾಜ್ ಶೆಟ್ಟಿ ಸ್ವಾಗತಿಸಿ, ಸುಪ್ರೀತಾ ಶೆಟ್ಟಿ ಬಡಾಕೆರೆ ನಿರೂಪಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…