ಪ್ರಾದೇಶಿಕ ಸುದ್ದಿ

ಜನವರಿ.22 ರಿಂದ ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ ಆರಂಭ

Share

ಕುಂದಾಪುರ:ಮೂರು ವರ್ಷಗಳ ಕಾಲದ ಹುಡುಕಾಟದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಶ್ರೀ ದೇವಿ ಮೂರ್ತಿ ಕೆತ್ತನೆಗೆ ಬೇಕಾದಂತಹ ರಕ್ತ ಚಂದನ ಮರ ದೊರಕಿದೆ.ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಸರಕಾರದ ನಿಯಮದ ಪ್ರಕಾರ ಮರವನ್ನು ದೇವಸ್ಥಾನದ ವತಿಯಿಂದ ಕೊಂಡುಕೊಳ್ಳಲಾಗಿದ್ದು. ಭವ್ಯ ಮೆರವಣಿಗೆಯಲ್ಲಿ ಈ ಹಿಂದೆ ಕರೆತರಲಾಗಿತ್ತು.ಶ್ರೀದೇವಿ ಮೂರ್ತಿ ಕೆತ್ತನೆ ಕಾರ್ಯ ಮುಗಿದಿದ್ದು ಬಹಳಷ್ಟು ಸುಂದರವಾಗಿ ಮೂಡಿ ಬಂದಿದೆ. ಶ್ರೀ ಭದ್ರಮಹಾಕಾಳಿ ಅಮ್ಮನವರ ಪ್ರತಿಷ್ಠಾಮಹೋತ್ಸವ ಕಾರ್ಯಕ್ರಮ ಜ.22 ರಿಂದ ಜ.24 ರ ವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ಕಟ್‍ಬೇಲ್ತೂರು ಭದ್ರಮಹಾಕಾಳಿ ದೈವಸ್ಥಾನದ ಆಡಳಿತ ಮಂಡಳಿ ಗೌರವಾಧ್ಯಕ್ಷರಾದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ಅಮ್ಮನವರ ಪುನರ್ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ದೈವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸುಮಾರು ಎಂಟುನೂರು ವರ್ಷಗಳಷ್ಟು ಹಳೆಯದಾದ ದೇವಿಯ ಮೂರ್ತಿಯಲ್ಲಿ ಭಿನ್ನ ಉಂಟಾಗಿದೆ ಎನ್ನುವ ವಿಚಾರ ಪ್ರಶ್ನಾಚಿಂತನೆಯ ಮುಖೇನ ಗೋಚರಿಸಿದ್ದರಿಂದ.ರಕ್ತ ಚಂದನ ಮರದಿಂದ ಹೊಸ ಬಿಂಬವನ್ನು ರಚಿಸಲಾಗಿದ್ದು.ದೈವಜ್ಞರ ಮುಖೇನ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.ಜ.20 ರಂದು ಹೆಮ್ಮಾಡಿ ಯಿಂದ ದೇವಿಯ ಸನ್ನಿಧಾನದ ವರೆಗೆ ಕಾಲ್ನಡಿಗೆಯಲ್ಲಿ ಪುರಮೆರವಣಿಗೆ ನಡೆಯಲಿದೆ.ಜ.21 ರಂದು ಹೊರೆಕಾಣಿಕೆ ಮೇರವಣಿಗೆ ಜರುಗಲಿದ್ದು.ಜ.24ಕ್ಕೆ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದ್ದು ಅಂದಾಜು ಹತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.ಎಲ್ಲರ ಸಹಕಾರದಿಂದ ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ದೈವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಬಿ.ಸೀತಾರಾಮ ಶೆಟ್ಟಿ ಮಾತನಾಡಿ,ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಕೇಳಿಕೊಂಡರು.
ಶ್ರೀ ಭದ್ರಮಹಾಕಾಳಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಬಿ.ವಿಠಲ ಶೆಟ್ಟಿ ಹೆಗ್ಡೆಯವರಮನೆ,ಶ್ರೀಧರ ಶೆಟ್ಟಿ,ಮಂಜು ಶೆಟ್ಟಿ,ಶೇಖರ ಬಳೆಗಾರ್,ಕಾರ್ಯದರ್ಶಿ ಚಂದ್ರನಾಯ್ಕ್ ಉಪಸ್ಥಿತರಿದ್ದರು.ಆಡಳಿತ ಮಂಡಳಿ ಅಧ್ಯಕ್ಷ ನಿವೃತ್ತ ಶಿಕ್ಷಕ ಕೆ.ಆನಂದ ಶೆಟ್ಟಿ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ರೀ ಭದ್ರಮಹಾಕಾಳಿ ದೇವಿಯ ರಕ್ತ ಚಂದನದ ನೂತನ ದಾರುಬಿಂಬದ ಪ್ರತಿಷ್ಠೆ ಹಾಗೂ ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮ ಜನವರಿ.22 ರಿಂದ ಜನವರಿ.24 ರ ತನಕ ನಡೆಯಲಿದೆ.ಧಾರ್ಮಿಕ ಸಭಾ ಕಾರ್ಯಕ್ರಮ,ಮನೋರಂಜನಾ ಕಾರ್ಯಕ್ರಮ ಜರುಗಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago