ಪ್ರಮುಖ

ಲಂಚ ಸ್ವೀಕರಿಸುತ್ತಿದ್ದಾಗಲೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಂಚಾಯಿತಿ ಅಧಿಕಾರಿಗಳು

Share

ಗಂಗೊಳ್ಳಿ:ವ್ಯಕ್ತಿಯೊಬ್ಬರಿಂದ ಲಂಚವನ್ನು ಸ್ವೀಕರಿಸುತ್ತಿದ್ದ ಸಮಯದಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಲೆಕ್ಕಪರಿಶೋಧಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ಬುಧವಾರ ನಡೆದಿದೆ.
ಆರೋಪಿತರಾದ ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಹೆಚ್ ಹಾಗೂ ಎಸ್‍ಡಿಎ ಸಿಬ್ಬಂದಿ ಶೇಖರ್.ಜಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ದಸ್ತಗಿರಿ ಮಾಡಿದ್ದಾರೆ.ಪಂಚಾಯಿತಿ ಮೇಲೆ ನಡೆದ ಲೋಕಾಯುಕ್ತ ದಾಳಿಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಗಂಗೊಳ್ಳಿ ಗ್ರಾಮದ ನಿವಾಸಿ ಮೊಹಮ್ಮದ್ ಹನೀಫ್ ಅವರು ಸರ್ವೇ ನಂಬರ್ 108/13 ರಲ್ಲಿ 8.25 ಸೆಂಟ್ಸ್ ಜಾಗವನ್ನು 9/11 ಮಾಡುವ ಉದ್ದೇಶದಿಂದ ನವೆಂಬರ್ 2024ರಲ್ಲಿ ದಾಖಲೆಗಳೊಂದಿಗೆ ಗಂಗೊಳ್ಳಿ ಗ್ರಾಮ ಪಂಚಾಯಿತಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು.ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಮತ್ತು ಎಸ್‍ಡಿಎ ಸಿಬ್ಬಂದಿ ಶೇಖರ್.ಜಿ ಅವರು ಕೆಲಸ ಮಾಡಿ ಕೊಡದೆ ಅರ್ಜೀದಾರರನ್ನು ಸತಾಯಿಸಿ,25 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.ಅರ್ಜೀದಾರ ಹನೀಫ್ ಪಂಚಾಯಿತಿ ಅಧಿಕಾರಿಗಳಿಗೆ ಹಣವನ್ನು ನೀಡದೆ ಉಡುಪಿ ಲೋಕಾಯುಕ್ತ ಪೆÇಲೀಸ್ ಠಾಣೆಗೆ ಜ.22 ರಂದು ದೂರನ್ನು ನೀಡಿದ್ದಾರೆ.ಅರ್ಜೀದಾರರು ನೀಡಿದ ದೂರಿನ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೆÇಲೀಸ್ ಅಧೀಕ್ಷಕ ನಟರಾಜ್ ಎಂಎ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಲೋಕಯುಕ್ತ ಪ್ರಭಾರ ಪೆÇಲೀಸ್ ಉಪಾಧೀಕ್ಷ ಉಡುಪಿ ಮಂಜುನಾಥ್,ಕರ್ನಾಟಕ ಲೋಕಯುಕ್ತ ಮಂಗಳೂರು ನಿರೀಕ್ಷಕ ಅಮಾನುಲ್ಲ ಎ ಮತ್ತು ಚಂದ್ರಶೇಖರ್ ಕೆ.ಎನ್ ಅವರ ನೇತೃತ್ವದಲ್ಲಿ ಮಧ್ಯಾಹ್ನ 1.10 ರ ಸುಮಾರಿಗೆ ಗಂಗೊಳ್ಳಿ ಪಂಚಾಯಿತಿ ಮೇಲೆ ದಾಳಿ ನಡೆಸಲಾಗಿದೆ.ಅರ್ಜೀದಾರ ಮೊಹಮ್ಮದ್ ಹನೀಫ್ ಅವರಿಂದ ಲಂಚದ ರೂಪದಲ್ಲಿ 22 ಸಾವಿರ.ರೂ ಅನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಮಾಶಂಕರ್.ಹೆಚ್ ಮತ್ತು ಎಸ್‍ಡಿಎ ಸಿಬ್ಬಂದಿ ಶೇಖರ್ ಜಿ ಹಣವನ್ನು ಸ್ವೀಕರಿಸುತ್ತಿದ್ದಾಗಲೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.ಉಡುಪಿ ಲೋಕಾಯುಕ್ತ ಠಾಣೆ ಸಿಬ್ಬಂದಿಗಳಾದ ನಾಗೇಶ್ ಉಡುಪ,ನಾಗರಾಜ್,ಮಲ್ಲಿಕಾ,ರೋಹಿತ್,ಪುಷ್ಪಾವತಿ,ಸತೀಶ್ ಹಂದಾಡಿ,ಅಬ್ದುಲ್ ಜಲಾಲ್,ರವೀಂದ್ರ,ರಮೇಶ್,ಪ್ರಸನ್ನ ದೇವಾಡಿಗ,ಸತೀಶ್ ಆಚಾರ್,ಸೂರಜ್,ರಾಘವೇಂದ್ರ ಹೊಸಕೋಟೆ,ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಠಾಣಾ ಸಿಬ್ಬಂದಿಗಳಾದ ರಾಧಾಕೃಷ್ಣ,ಮಹೇಶ್,ವಿನಾಯಕ,ವೈಶಾಲಿ,ಶರತ್ ಸಿಂಗ್,ಗಂಗಣ್ಣ,ಪಂಪಣ್ಣ ಅವರು ಕಾರ್ಯಾಚರಣೆಯಲ್ಲಿ ಭಾಗವಹಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago