ಶಿಕ್ಷಕ ಉದಯ ಕುಮಾರ್ ಶೆಟ್ಟಿಗೆ ರಾಜ್ಯಪಾಲರಿಂದ ಪುರಸ್ಕಾರ

ಕುಂದಾಪುರ:ಕರ್ನಾಟ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ಟೌನ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕಿನ ಬೈಂದೂರು ವಲಯದ ಆಲೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕ ಉದಯ ಕುಮಾರ್ ಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರವನ್ನು ನೀಡಿ ಗೌರವಿಸಿದರು.ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ ಮೀನಾ,ಬಿ.ಬಿ.ಎಂ.ಪಿ ಆಯುಕ್ತ ತುಷಾರ ಗಿರಿನಾಥ್ ಉಪಸ್ಥಿತರಿದ್ದರು.




















































































































































































































































































































































































































































































































































































































































































































































































































































































































































































































































































































































































































































































































































































































































































