ಮುಳ್ಳಿಕಟ್ಟೆಯಲ್ಲಿ ಲಾರಿ ಪಲ್ಟಿ:ಚಾಲಕನಿಗೆ ಗಾಯ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮುಳ್ಳಿಕಟ್ಟೆ ಸರ್ಕಲ್ ಸಮೀಪ ಅರಾಟೆಗೆ ಸಂಪರ್ಕ ಕಲ್ಪಿಸುವ ಸರ್ವಿಸ್ ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಚಾಲಕ ಮತ್ತು ಕ್ಲಿನರ್ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕ ಅತಿಯಾದ ಮದ್ಯವನ್ನು ಸೇವಿಸಿದ್ದರ ಪರಿಣಾಮ ರಸ್ತೆಯನ್ನು ಗುರುತಿಸಲು ಸಾಧ್ಯವಾಗದೆ.ರಸ್ತೆ ಅಂಚಿನ ಮೇಲೆ ಲಾರಿ ಚಲಾಯಿಸಿದ್ದು.ನಿಯಂತ್ರಣ ಕಳೆದುಕೊಂಡ ಲಾರಿ ಮಗುಚಿ ಸರ್ವಿಸ್ ರಸ್ತೆ ಮೇಲೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಅಭಿಪ್ರಾಯ ತಿಳಿಸಿದ್ದಾರೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.