ಪಡುವರಿ ಕಲ್ಲಾರ್‍ಹಿತ್ಲು,ನಜ್ರೆ ಹಿತ್ಲು ರಸ್ತೆ ಅಭಿವೃದ್ಧಿಗೆ ಆಗ್ರಹ

ಕುಂದಾಪುರ:ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಕಲ್ಲಾರ್ ಹಿತ್ಲು ಮತ್ತು ನಜ್ರೆಹಿತ್ಲು ಪರಿಸರಕ್ಕೆ ಸಂಪರ್ಕ ಕಲ್ಪಿಸುವ ಸುಮಾರ್ 1 ಕಿ.ಮೀ ವರೆಗಿನ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ.ದುಸ್ಥಿತಿಯಲ್ಲಿದ್ದ ರಸ್ತೆಯಲ್ಲಿ ಸಾಗುವುದು ಕಷ್ಟಕರವಾಗಿದ್ದು.ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಸ್ಥಳೀಯ ಸ್ವಸಾಹಯ ಸಂಘಗಳಾದ ಆಶಾದೀಪ,ದಿವ್ಯಜ್ಯೋತಿ,ಪ್ರಕೃತಿ,ಸ್ಪಂದನ ಹಾಗೂ ಧರ್ಮಸ್ಥಳ ಸ್ವಸಾಹಯ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಬೈಂದೂರು ಪಟ್ಟಣ ಪಂಚಾಯಿತಿಗೆ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ.ರಸ್ತೆಯನ್ನು ದುರಸ್ತಿಗೊಳಿಸುವಲ್ಲಿ ಇಲ್ಲಿ ತನಕ ಯಾವುದೆ ರೀತಿ ಕ್ರಮಕೈಗೊಂಡಿಲ್ಲ ಎಂದು ದೂರಿದ್ದಾರೆ.