ರಾಜ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಸುರೇಂದ್ರ ಗುಡ್ಡೆ ಹೋಟೆಲ್ ನಾಡ ಆಯ್ಕೆ

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ( ರಿ) ಬೆಂಗಳೂರು.ಇದರಲ್ಲಿ ಸದಸ್ಯರಾಗಿದ್ದು ಹಾಗೂ ಸಂಘದಲ್ಲಿ ಸದಾ ಕ್ರಿಯಾಶೀಲರಾಗಿ ತಮ್ಮ ರಾಜ್ಯ ಮತ್ತು ರಾಷ್ಟ್ರಮಟ್ಟದ ಚಟುವಟಿಕೆಗಳ ಮೂಲಕ ಮಾದರಿಯಾಗಿರುವ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಸೇನಾಪುರದ ಶ್ರೀ ಸುರೇಂದ್ರ ಗುಡ್ಡೆ ಹೋಟೆಲ್ ನಾಡ.ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಶ್ರೀ ವಿಶ್ವನಾಥ್ ಧುಮಾಳ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್ ಸರಿಕಾರ್,ಶ್ರೀ ಎನ್,ಎಲ್ ರಾಠೋಡ್ ಹಾಗೂ ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಮಾಡಿರುತ್ತಾರೆ. ಇವರು ಶ್ರೀ ಸಿದ್ದಲಿಂಗೇಶ್ವರ ಅನುದಾನಿತ ಪ್ರೌಢಶಾಲೆ ಮಾಗಡಿ ರಸ್ತೆ ಬೆಂಗಳೂರು ದಕ್ಷಿಣ ಇಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.