ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ ದರದಲ್ಲಿ ಸಾಗುತ್ತಿದೆ ಎಂದು ಮೈಸೂರು ಮರ್ಕಂಟೈಲ್ ಕಂಪೆನಿಯ ಚೇರ್ ಮೆನ್ ಉದ್ಯಮತಾರೆ ಡಾ. ಹೆಚ್.ಎಸ್.ಶೆಟ್ಟಿ ಹೇಳಿದರು.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಗುಸಿಟಿ ಮೈದಾನದಲ್ಲಿ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಆಯೋಜನೆ ಗೊಂಡಿರುವ ಬೈಂದೂರು ಜೋಡುಕೆರೆ ಕಂಬಳದ ಅಂಗವಾಗಿ ಗುರುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಬಸ್ರೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಕಂಬಳದ ಇತಿಹಾಸದಲ್ಲಿ ಬೈಂದೂರು ಜೋಡುಕರೆ ಕಂಬಳ ಹೊಸ ಇತಿಹಾಸ ಸೃಷ್ಟಿಸುವಂತೆ ಆಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಲಾಯಿತು. ಸಬಾಧ್ಯಕ್ಷತೆ ವಹಿಸಿದ್ದ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ,ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವು ದಶಕಗಳಿಂದ ಬೈಂದೂರು ಕಂಬಳೋತ್ಸವ ನಡೆಸಿಕೊಂಡು ಬರುತ್ತಿದ್ದು,ಈ ಬಾರಿ ಮುಳ್ಳಿಕಟ್ಟೆಯಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ಜೋಡುಕೆರೆ ಕಂಬಳ ಆಯೋಜಿಸಲಾಗಿದೆ. ಮೂರುದಿನಗಳ ಕಾಲ ನಿರಂತರವಾಗಿ ಜೋಡುಕೆರೆ ಕಂಬಳ ನಡೆಸಲಾಗುತ್ತಿದೆ.ಅವಿಭಜಿತ ಜಿಲ್ಲೆಗಳಿಂದ ಕಂಬಳದ ಕೋಣಗಳು ಬಹಳಷ್ಟು ಸಂಖ್ಯೆಯಲ್ಲಿ ಭಾಗವಹಿಸಲಿದೆ ಎಂದರು.
ಡಾ. ಹೆಚ್.ಎಸ್ ಶೆಟ್ಟಿ ಅವರನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಬಳಿಕ ಜನತಾ ಪಿಯು ಕಾಲೇಜು ಹೆಮ್ಮಾಡಿ ವಿದ್ಯಾರ್ಥಿಗಳಿಂದ ಹಾಗೂ ಅರೆಹೊಳೆ ಪ್ರತಿಷ್ಠಾನ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ವರದಿ: ಜಗದೀಶ್ ದೇವಾಡಿಗ ಮುಳ್ಳಿಕಟ್ಟೆ
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…