ಜೂನ್.29 ರಂದು ಭೀಮ ಶಕ್ತಿ ಸಮಾವೇಶ
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ ಶಕ್ತಿ ಸಮಾವೇಶ ಜೂನ್.29 ರಂದು ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ.ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಕಾರ್ಯಕ್ರಮ ಉದ್ಘಾಟಿಸಲಿದ್ದು,ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ ಗಿಳಿಯಾರು ಅಧ್ಯಕ್ಷತೆ ವಹಿಸಲಿದ್ದಾರೆ.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದು.ಅತಿಥಿಗಣ್ಯರು ಇವೊಂದು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.