ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35) ಎಂಬಾತನನ್ನು ಮುಳ್ಳಿಕಟ್ಟೆ-ಗಂಗೊಳ್ಳಿ ಮುಖ್ಯ ರಸ್ತೆ ಹೊಸಾಡು ಗ್ರಾಮದ ಗುಹೇಶ್ವರ ದೇವಸ್ಥಾನಕ್ಕೆ ಸಂಪರ್ಕಕಲ್ಪಿಸುವ ಕ್ರಾಸ್ ರಸ್ತೆಯಲ್ಲಿ ಗಂಗೊಳ್ಳಿ ಠಾಣೆ ಪೆÇಲೀಸರು ಬಂಧಿಸಿ ಕಾನೂನುಕ್ರಮ ಜರುಗಿಸಿದ್ದಾರೆ.
ಬಂಧಿತ ಆರೋಪಿತ ನಿಂದ 7500.ರೂ ಮೌಲ್ಯದ 25 ಕೆ.ಜಿ ದನದ ಮಾಂಸ,ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಯನ್ನು ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಪವನ್ ನಾಯಕ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿದ್ದು.ಸಿಬ್ಬಂದಿಗಳಾದ ಶಾಂತರಾಮ್ ಶೆಟ್ಟಿ,ಕೃಷ್ಣ,ರಾಘವೇಂದ್ರ ಪೂಜಾರಿ,ರಾಜು ನಾಯ್ಕ್,ಚೇತನ್ ಪೂಜಾರಿ,ಸಂದೀಪ ಕುರಾಣಿ ಭಾಗವಹಿಸಿದ್ದರು.ಜೂನ್.18 ರಂದು ಕೆ.ಇ.ಬಿ ಕಚೇರಿ ಎದುರು ದನ ಕರುಗಳನ್ನು ಕಾರಿಗೆ ತುಂಬಿ ಕಳವಿಗೆ ಪ್ರಯತ್ನಿಸಿದ ಪ್ರಕರಣದಲ್ಲಿ ಈತ ಭಾಗಿಯಾಗಿರುವುದು ವಿಚಾರಣೆಯಲ್ಲಿ ಬಂದಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…