ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಕಾರ್ಯಕ್ರಮದ ಅಂಗವಾಗಿ ಪರಿಸರ ಸ್ವಚ್ಛತೆ ಮತ್ತು ಗಿಡ ನೆಡುವ ಕಾರ್ಯಕ್ರಮ ಮರವಂತೆಯಲ್ಲಿ ನಡೆಯಿತು.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಾಜಿ ವ್ಯವಸ್ಥಾಪಕ ಎಸ್.ವಿಶ್ವಂಬರ ಐತಾಳ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು.ಸಂಘದ ಅಧ್ಯಕ್ಷೆ ಕಮಲಾಕ್ಷಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು,ಉಪಾಧ್ಯಕ್ಷೆ ವನಿತಾ ಖಾರ್ವಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ ಅಡಿಗ,ಸ್ಥಳೀಯರಾದ ಕೃಷ್ಣ ಖಾರ್ವಿ ಮರವಂತೆ,ಸಂಘದ ನಿರ್ದೇಶಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.ಸಿಇಒ ಶ್ರೀನಿವಾಸ ಅಡಿಗ ಸ್ವಾಗತಿಸಿ,ನಿರೂಪಿಸಿದರು.ಸಂಘದ ವಠಾರದಲ್ಲಿ ಸ್ವಚ್ಛತಾ ಕಾರ್ಯ ಸಹಿತ ಗಿಡ ನೆಡಲಾಯಿತು.





















































































































































































































































































































































































































































































































































































































































































































































































































































































































































































































































































































































































































































































































































































































































































