ಕುಂದಾಪುರ

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

Share

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು ಖಾಸಗಿ ಜಾಗದ ಮಾಲೀಕರು ಬಂದ್ ಮಾಡಿರುವುದನ್ನು ವಿರೋಧಿಸಿ.ಸಾರ್ವಜನಿಕ ಸ್ಮಶಾನವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ಕಂಚುಗೋಡು ಸನ್ಯಾಸಿ ಬಲ್ಲೆ ಗ್ರಾಮಸ್ಥರು ಗುಜ್ಜಾಡಿ ಗ್ರಾಮ ಪಂಚಾಯಿತಿ ಎದುರುಗಡೆ ಅಹೋರಾತ್ರಿ ಧರಣಿ ಸತ್ಯಾಗ್ರಹದ ಮೂಲಕ ಪ್ರತಿಭಟನೆಯನ್ನು ಶುಕ್ರವಾರ ನಡೆಸಿದರು.ಸ್ಮಶಾನ ಸಂಪರ್ಕಕ್ಕೆ ದಾರಿ ಕಲ್ಪಿಸುವುದರ ಜತೆಗೆ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸುಮಾರು ಎರಡು ಶತಮಾನಕ್ಕೂ ಹೆಚ್ಚು ಕಾಲ ಕಂಚುಗೋಡು ಸನ್ಯಾಸಿ ಬಲ್ಲೆ ಸ್ಮಶಾನ ಹಾಗೂ ನಾಗದೇವಸ್ಥಾನ,ರಾಮನಾಥ ಮಹಮ್ಮಾಯಿ ಮತ್ತು ನವದುರ್ಗೆ ದೇವಸ್ಥಾನಕ್ಕೆ ಸಂರ್ಪಕ್ಕ ಹೊಂದಿರುವ ರಸ್ತೆಯನ್ನು ಖಾಸಗಿ ಜಾಗದ ಮಾಲೀಕರು ಕಳೆದ ಎರಡು ವರ್ಷಗಳಿಂದ ಬಂದ್ ಮಾಡಿದ್ದಾರೆ.ರಸ್ತೆ ಸಂಪರ್ಕ ವ್ಯವಸ್ಥೆ ಕಡಿತಮಾಡಿದ್ದರಿಂದ ಸ್ಮಶಾನ ಸಂಪರ್ಕಕ್ಕೆ ಮತ್ತು ದೇವಸ್ಥಾನಕ್ಕೆ ರಸ್ತೆ ಇಲ್ಲದಂತಾಗಿದೆ.ಸ್ಮಶಾನ ಸಂಪರ್ಕಕ್ಕೆ ದಾರಿ ವ್ಯವಸ್ಥೆ ಇಲ್ಲದೆ ಶವವನ್ನು ದಫನ ಮಾಡಲು ತೊಂದರೆ ಉಂಟಾಗುತ್ತಿದ್ದು.ಸತ್ತ ಜೀವಕ್ಕೆ ಮುಕ್ತಿ ನೀಡಲು ಊರೂರು ಸುತ್ತ ಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಹೆಣವನ್ನು ಸುಡಲು ತೊಂದರೆ ಉಂಟಾಗುತ್ತಿದೆ.ದೇವಸ್ಥಾನದ ಅಭಿವೃದ್ಧಿಯನ್ನು ಕೂಡ ಮಾಡಲಾಗುತ್ತಿಲ್ಲ.ಸ್ಮಶಾನಕ್ಕೆ ರಸ್ತೆ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಕಳೆದ ಎರಡು ವರ್ಷಗಳಿಂದ ಗುಜ್ಜಾಡಿ ಪಂಚಾಯಿತಿಗೆ ಅಲೆದು ಅಲೆದು ಸಾಕಾಗಿ ಹೋಗಿದೆ.ಅಧಿಕಾರಿ ವರ್ಗದವರು ಹಣ ಬಲದ ಮುಂದೆ ಸಾರ್ವಜನಿಕ ಸಮಸ್ಯೆಗೆ ಸ್ಪಂದನೆ ಮಾಡುತ್ತಿಲ್ಲ ಎಂದು ಆಪಾದಿಸಿರುವ ಗ್ರಾಮದ ಜನರು.ಸ್ಮಶಾನವನ್ನು ಧ್ವಂಸ ಮಾಡಲಾಗಿದೆ ಎಂದು ದೂಷಿಸಿದ್ದಾರೆ.ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಜುಲೈ 7 ರಂದು ಅಣಕು ಶವಯಾತ್ರೆ ನಡೆಸಿ ಗ್ರಾಮಸ್ಥರು ಗುಜ್ಜಾಡಿ ಪಂಚಾಯಿತಿ ಎದುರುಗಡೆ ಪ್ರತಿಭಟನೆ ನಡೆಸಿದ್ದರು.ಕುಂದಾಪುರ ತಹಶೀಲ್ದಾರ್,ಇಒ,ಆರ್‍ಐ ಭೇಟಿ ನೀಡಿದ್ದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಪವನ್ ನಾಯ್ಕ್ ನೇತೃತ್ವದಲ್ಲಿ ಪೆÇಲೀಸ್ ರಕ್ಷಣೆ ನೀಡಲಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago