ಕುಂದಾಪುರ:ಆದಿವಾಸಿ ಜನಾಂಗದ ಮುಖಂಡರಾದಂತಹ ಬಿರ್ಸಾ ಮುಂಡ ಅವರ ಜನ್ಮ ದಿನಾಚರಣೆ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿದಂತೆ ಬುಡಕಟ್ಟು ಜನಾಂಗದವರು ವಾಸ ಮಾಡುವಂತಹ ಪ್ರದೇಶಗಳನ್ನು ಗುರುತಿಸಿ ಎಲ್ಲಾ ರೀತಿಯ ಸೌಲಭ್ಯಗಳನ್ನು ದೊರಕಿಸಿ ಕೊಡಬೇಕು ಎನ್ನುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದ್ದು.ಅದರ ಭಾಗವಾಗಿ ಬೈಂದೂರು ಕ್ಷೇತ್ರದಲ್ಲಿ ಸುಮಾರು 4.ಕೋಟಿಗೂ ಅಧಿಕ ಮೊತ್ತದ ಅನುದಾನದಲ್ಲಿ ಪಿಎಂ ಜನ್‍ಮನ್ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಪಿಎಂ ಜನ್‍ಮನ್ ಯೋಜನೆಯಡಿ 94.34 ಲಕ್ಷ.ರೂ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರ್ಕೂರು-ನಾರ್ಕಳಿ ಮದುಕೊಡ್ಲು ಎಸ್.ಟಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೆಲಸಕ್ಕೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಜಲಜೀವನ್ ಮೆಷಿನ್ ಯೋಜನೆಯಡಿ 800 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೆಲಸ ಪ್ರಗತಿಯಲ್ಲಿದೆ.ಮೋದಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಅನೇಕ ಜನಾಪಯೋಗಿ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಗಿದೆ ಎಂದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಜನ್‍ಮನ್ ಯೋಜನೆ ದೇಶದ ಅಭಿವೃದ್ಧಿ ದಿಕ್ಕನೆ ಬದಲಿಸಲಿದೆ ಎಂದು ಅಭಿಪ್ರಾಯಪಟ್ಟರು.
ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ,ನಿಕಟಪೂರ್ವ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ ಆರ್ ದೇವಾಡಿಗ,ಬಿಜೆಪಿ ಪಕ್ಷದ ಮುಖಂಡರಾದ ಚಿತ್ತರಂಜನ್ ಹೆಗ್ಡೆ ಹರ್ಕೂರು,ಮಂಜಯ್ಯ ಶೆಟ್ಟಿ ಹರ್ಕೂರು,ಪಂಚಾಯಿತಿ ಸದಸ್ಯರಾದ ಸುಬ್ಬಣ್ಣ ಶೆಟ್ಟಿ,ಪ್ರಸನ್ನ ಶೆಟ್ಟಿ,ಪ್ರಮೋದ ಶೆಟ್ಟಿ,ರವಿ ಶೆಟ್ಟಿ ಆಲೂರು,ಅಪ್ಪÅ ಕುಲಾಲ್,ರಾಜು ಪೂಜಾರಿ,ಪ್ರಶಾಂತ್ ಕುಲಾಲ್,ಬಿರ್ಸಾ ಮುಖಂಡ ರಾಜೇಶ ರಾಮಣ್ಣ,ಬಿಜೆಪಿ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…