ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ ‘ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಪ್ರೊಫೆಸರ್ ಸುಕನ್ಯಾ ಮಾರ್ಟೀಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಅತಿ ಹೆಚ್ಚು ಜನರು ಮಾತನಾಡುವ ಹಿಂದಿ ಭಾಷೆ ರಾಷ್ಟ್ರ ಭಾಷೆ ಮಾನ್ಯತೆ ನೀಡಲಾಗಿದೆ.ಹಿಂದಿ ಭಾಷೆ ಪುರಾತನ ಭಾಷೆ ಆಗಿದ್ದು ತನ್ನದೇ ರೀತಿಯಲ್ಲಿ ಇತಿಹಾಸ ಹೊಂದಿದೆ ಎಂದು ವಿವರಿಸಿದರು.
ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ರಾಝಿಕ ಅವರು ಮಾತನಾಡಿ,ಕನ್ನಡ ಇಂಗ್ಲಿಷ್ ಭಾಷೆ ಅಷ್ಟೇ ಪ್ರಾಮುಖ್ಯತೆ ಹಿಂದಿ ಭಾಷೆಗೂ ಇದೆ.ಉದ್ಯೋಗದ ದೃಷ್ಟಿಯಲ್ಲಿ ಹಿಂದಿ ಭಾಷೆ ಕಲಿಯುವುದು ಬಹಳಷ್ಟು ಮುಖ್ಯ ಎಂದರು.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ, ಪ್ರಿನ್ಸಿಪಾಲ್ ಸೀಮಾ ಭಟ್, ವೈಸ್ ಪ್ರಿನ್ಸಿಪಾಲ್ ಸುಜಾತಾ. ಆಡಳಿತಧಿಕಾರಿ ಮಮತಾ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ನಂದಿನಿ ನಿರೂಪಿಸಿದರು, ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದೀಪ,ತೃತೀಯ ಪ್ಯಾಷನ್ ಡಿಸೈನ್ ವಿಭಾಗದ ವಿದ್ಯಾರ್ಥಿನಿ ನವ್ಯಶ್ರೀ ಕಾರ್ಯಕ್ರಮ ನಡೆಸಿಕೊಟ್ಟರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…