ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಿವಾಸಿ ಶಿಕ್ಷಕ ಸುರೇಂದ್ರ ನಾಡಗುಡ್ಡೆಹೋಟೆಲ್ ಅವರ ಅನುಪಮ ಸೇವೆಯನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಷ್ಠೆಯನ್ನು ಗಳಿಸಿರುವ ಬಾಸ್ಕೋ ಸ್ವಯಂ ಸೇವಾ ಸಂಸ್ಥೆ ಬೆಂಗಳೂರು ಮಕ್ಕಳ ಮಿತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಸುಪ್ರೀಂ ಕೋರ್ಟ್ ಮಾಜಿ ನ್ಯಾಯ ಮೂರ್ತಿ ಮತ್ತು ಕರ್ನಾಟಕದ ಮಾಜಿ ಲೋಕಾಯುಕ್ತರಾದ ಎನ್.ಸಂತೋಷ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಬಾಸ್ಕೋ ಸಂಸ್ಥೆ ಮುಖ್ಯಸ್ಥ ಫಾದರ್ ವರ್ಗೀಸ್,ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಹಿರಿಯ ಅಧಿಕಾರಿಗಳು,ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಶಿಕ್ಷಕ ಸುರೇಂದ್ರ ನಾಡ ಗುಡ್ಡೆಹೋಟೆಲ್ ಅವರು ಪ್ರಸ್ತುತ ಶ್ರೀ ಸಿದ್ಧಲಿಂಗೇಶ್ವರ ಸರಕಾರಿ ಅನುದಾನಿತ ಕನ್ನಡ ಪ್ರೌಢ ಶಾಲೆಯಲ್ಲಿ ಮಾಗಡಿ ರಸ್ತೆ ಬೆಂಗಳೂರು ದಕ್ಷಿಣ ಜಿಲ್ಲೆ ವಲಯ-2 ರಲ್ಲಿ ಸೇವೆ ಸಲ್ಲಿಸುತ್ತಾ ಇದ್ದಾರೆ.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…
ಕುಂದಾಪುರ:ಶ ಓಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಿ.ಎಸ್.ಆರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಕರಾವಳಿ ಮಿಷನ್ ತಂಡದ ವತಿಯಿಂದ ಬೈಂದೂರು…