ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

Share

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು ಬ್ಯಾಂಕ್,ಸೌಪರ್ಣಿಕಾ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಹೊಸಾಡು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹೊಸಾಡು ಗ್ರಾಮ ಪಂಚಾಯಿತಿ ವಠಾರದಲ್ಲಿ ಸೋಮವಾರ ಗ್ರಾಮೋತ್ಸವ ಕಾರ್ಯಕ್ರಮ ನಡೆಯಿತು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೊಸಾಡು ಗ್ರಾಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಬೇರೆ ಬೇರೆ ಇಲಾಖೆಗಳ ಯೋಜನೆಗಳು ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಿಸಬೇಕು ಎನ್ನುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮತ್ತು ಸಂಜೀವಿನಿ ಸಂಘಗಳ ಮೂಲಕ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೋತ್ಸವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
ಪಂಚಾಯಿಯಲ್ಲಿ ಬೋರ್ಡ್ ಇಲ್ಲದೆ ಇದ್ದರೂ ತಮ್ಮ ಕಾರ್ಯವೈಖರಿ ಮೂಲಕ ಅಚ್ಚುಕಟ್ಟಾಗಿ ಗ್ರಾಮೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿ ಸರಕಾರಿ ಸೌಲಭ್ಯ ಮಾಹಿತಿ ವಿಚಾರಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಶ್ರಮಿಸಿದ ಪಂಚಾಯಿ ಅಧಿಕಾರಿಗಳು ಮತ್ತು ಸಂಜೀವಿನಿ ಸಂಘದ ಸದಸ್ಯರ ಕಾರ್ಯವೈಖರಿಯನ್ನು ಶ್ಲಾಘೀಸಿದರು.
ಹೊಸಾಡು ಪಂಚಾಯಿತಿ ಆಡಳಿತಾಧಿಕಾರಿ ಸತ್ಯನಾರಾಯಣ ಜಿ ಅಧ್ಯಕ್ಷತೆ ವಹಿಸಿದ್ದರು,ಡಾ.ವಿನಿತಾ,ಡಾ.ಸುಲೋಚನಾ,ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹೊಸಾಡು ಅಧ್ಯಕ್ಷೆ ಯಶೋದ,ಗಂಗೊಳ್ಳಿ ಠಾಣೆ ಪಿಎಸ್‍ಐ ಪವನ್ ನಾಯ್ಕ್,ಹೊಸಾಡು ಗ್ರಾಮ ಆಡಳಿತಾಧಿಕಾರಿ ಮಾಧವ ಕೊಠಾರಿ ಮತ್ತು ಸೇನಾಪುರ ಗ್ರಾಮ ಆಡಳಿತಾಧಿಕಾರಿ ಅನಿಲ್ ಮೇತ್ರಿ,ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ,ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಮತ್ತು ಮಾಜಿ ಸದಸ್ಯ ರಮೇಶ್ ಆಚಾರ್ಯ,ವಿವಿಧ ಸಂಘಟನೆಗಳ ಪದಾಧಿಕಾರಿಗಳು,ಸಂಜೀವಿನಿ ಸಂಘದ ಸದಸ್ಯರು,ಹೊಸಾಡು ಮತ್ತು ಸೇನಾಪುರ ಗ್ರಾಮದ ಶಾಲೆ ಮತ್ತು ಅಂಗನವಾಡಿ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ,ಆರೋಗ್ಯ ತಪಾಸಣೆ,ಇಲಾಖೆಗಳ ಮಾಹಿತಿ ಕಾರ್ಯಕ್ರಮ ನಡೆಯಿತು.ಉತ್ಸುಕತೆಯಿಂದ ಗ್ರಾಮಸ್ಥರು ಗ್ರಾಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಹೊಸಾಡು ಪಿಡಿಒ ಶೋಭಾ ಸ್ವಾಗತಿಸಿದರು.ಸುಂದರ ಜಿ ನಿರೂಪಿಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page