ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು ಬ್ಯಾಂಕ್,ಸೌಪರ್ಣಿಕಾ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಹೊಸಾಡು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹೊಸಾಡು ಗ್ರಾಮ ಪಂಚಾಯಿತಿ ವಠಾರದಲ್ಲಿ ಸೋಮವಾರ ಗ್ರಾಮೋತ್ಸವ ಕಾರ್ಯಕ್ರಮ ನಡೆಯಿತು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೊಸಾಡು ಗ್ರಾಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಬೇರೆ ಬೇರೆ ಇಲಾಖೆಗಳ ಯೋಜನೆಗಳು ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಿಸಬೇಕು ಎನ್ನುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮತ್ತು ಸಂಜೀವಿನಿ ಸಂಘಗಳ ಮೂಲಕ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೋತ್ಸವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
ಪಂಚಾಯಿಯಲ್ಲಿ ಬೋರ್ಡ್ ಇಲ್ಲದೆ ಇದ್ದರೂ ತಮ್ಮ ಕಾರ್ಯವೈಖರಿ ಮೂಲಕ ಅಚ್ಚುಕಟ್ಟಾಗಿ ಗ್ರಾಮೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿ ಸರಕಾರಿ ಸೌಲಭ್ಯ ಮಾಹಿತಿ ವಿಚಾರಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಶ್ರಮಿಸಿದ ಪಂಚಾಯಿ ಅಧಿಕಾರಿಗಳು ಮತ್ತು ಸಂಜೀವಿನಿ ಸಂಘದ ಸದಸ್ಯರ ಕಾರ್ಯವೈಖರಿಯನ್ನು ಶ್ಲಾಘೀಸಿದರು.
ಹೊಸಾಡು ಪಂಚಾಯಿತಿ ಆಡಳಿತಾಧಿಕಾರಿ ಸತ್ಯನಾರಾಯಣ ಜಿ ಅಧ್ಯಕ್ಷತೆ ವಹಿಸಿದ್ದರು,ಡಾ.ವಿನಿತಾ,ಡಾ.ಸುಲೋಚನಾ,ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹೊಸಾಡು ಅಧ್ಯಕ್ಷೆ ಯಶೋದ,ಗಂಗೊಳ್ಳಿ ಠಾಣೆ ಪಿಎಸ್‍ಐ ಪವನ್ ನಾಯ್ಕ್,ಹೊಸಾಡು ಗ್ರಾಮ ಆಡಳಿತಾಧಿಕಾರಿ ಮಾಧವ ಕೊಠಾರಿ ಮತ್ತು ಸೇನಾಪುರ ಗ್ರಾಮ ಆಡಳಿತಾಧಿಕಾರಿ ಅನಿಲ್ ಮೇತ್ರಿ,ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ,ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಮತ್ತು ಮಾಜಿ ಸದಸ್ಯ ರಮೇಶ್ ಆಚಾರ್ಯ,ವಿವಿಧ ಸಂಘಟನೆಗಳ ಪದಾಧಿಕಾರಿಗಳು,ಸಂಜೀವಿನಿ ಸಂಘದ ಸದಸ್ಯರು,ಹೊಸಾಡು ಮತ್ತು ಸೇನಾಪುರ ಗ್ರಾಮದ ಶಾಲೆ ಮತ್ತು ಅಂಗನವಾಡಿ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ,ಆರೋಗ್ಯ ತಪಾಸಣೆ,ಇಲಾಖೆಗಳ ಮಾಹಿತಿ ಕಾರ್ಯಕ್ರಮ ನಡೆಯಿತು.ಉತ್ಸುಕತೆಯಿಂದ ಗ್ರಾಮಸ್ಥರು ಗ್ರಾಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಹೊಸಾಡು ಪಿಡಿಒ ಶೋಭಾ ಸ್ವಾಗತಿಸಿದರು.ಸುಂದರ ಜಿ ನಿರೂಪಿಸಿದರು.
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…