ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ


ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಗಳಿಸಿರುವ ಹೊಸಾಡು ಗ್ರಾಮದ ನಿವಾಸಿ ಸವಿತಾ ಸುಕುಮಾರ ಸುವರ್ಣ ಅವರ ಪುತ್ರಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ (ಬೋರ್ಡ್ ಹೈಸ್ಕೂಲ್) ವಿದ್ಯಾರ್ಥಿನಿ ವೈಷ್ಣವಿ ಎಸ್.ಎಚ್ ಅವರಿಗೆ ಕುಂದಾಪುರ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ಪರವಾಗಿ ಅಭಿನಂದಿಸಿ.50 ಸಾವಿರ ರೂಪಾಯಿ ಮೌಲ್ಯದ ಚೆಕ್ ವಿತರಿಸಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ,ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್,ತಹಶೀಲ್ದಾರ್ ಪ್ರದೀಪ್ ಕುರುಡೇಕರ್,ಡಿವೈಎಸ್‍ಪಿ ಹೆಚ್.ಡಿ ಕುಲಕರ್ಣಿ,ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವೈಷ್ಣವಿ ಅವರು ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625 ರಲ್ಲಿ 619 ಅಂಕ ಗಳಿಸುವುದರ ಮುಖೇನ ರಾಜ್ಯದಲ್ಲಿ 7ನೇ ಸ್ಥಾನ ಪಡೆದಿದ್ದರು.ಸರಕಾರ ನೀಡಿರುವ ಪ್ರೆÇೀತ್ಸಾಹ ಧನ ವಿದ್ಯಾರ್ಥಿನಿಯ ಆಧಾರ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ ಮುಂದಿನ 15 ದಿನಗಳ ಒಳಗೆ ಜಮೆ ಆಗಲಿದೆ.


























































































































































































































































































































































































































































































































































































































































































































































































































































































































































































































































































































































































































































































































































































































































































