ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ ನಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ. ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಭಾನುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಮ್ಯಾರಥಾನ್ ನಡೆದಿದ್ದು, ಇದರಲ್ಲಿ ಭಾಗಿಯಾಗಿದ್ದರು. ಓಡುತ್ತಿರುವಾಗ ಹಠಾತ್ತನೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಡುಪಿ ಟಿಎಂಎ ಪೈ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವೈದ್ಯರು ಘೋಷಿಸಿದ್ದಾರೆ.ನಾಸಿರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…