ಪ್ರಾದೇಶಿಕ ಸುದ್ದಿ

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

Share

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ ನಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ. ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಭಾನುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಮ್ಯಾರಥಾನ್ ನಡೆದಿದ್ದು, ಇದರಲ್ಲಿ ಭಾಗಿಯಾಗಿದ್ದರು. ಓಡುತ್ತಿರುವಾಗ ಹಠಾತ್ತನೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಡುಪಿ ಟಿಎಂಎ ಪೈ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವೈದ್ಯರು ಘೋಷಿಸಿದ್ದಾರೆ.ನಾಸಿರ್‌ ಹುಸೇನ್‌ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 months ago