ಪ್ರಮುಖ

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

Share

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ ಶನಿವಾರ ಸಂಭವಿಸಿದೆ.ಬೆಂಗಳೂರು ನೆಲಮಂಗಲ ನಿವಾಸಿಗಳಾದ ಮಮತ (36),ದ್ರತಿಕಾ (14) ಮ್ರತ ಪಟ್ಟಿದ್ದಾರೆ. ರಾಘು,ಜಾನ್ವಿ,ಚಾರ್ವಿ,ಕಿರಣ್ ಗಾಯಗೊಂಡಿದ್ದಾರೆ.
ಬೆಂಗಳೂರು ನೆಲಮಂಗಲ ದಿಂದ ಪ್ರವಾಸಕ್ಕೆ ಹೊರಟ್ಟಿದ್ದ ಪ್ರವಾಸಿಗರು ಮಂಗಳೂರು ತಲುಪಿ ಶನಿವಾರ ಬೆಳಗ್ಗೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಮಾರ್ಗವಾಗಿ ಗೋಕರ್ಣಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ನಾವುಂದ ಮಸ್ಕಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ನಿಯಂತ್ರಣ ಕಳೆದುಕೊಂಡ ಕಾರು ಢಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಕಾರು ಪಲ್ಟಿ ಹೊಡೆದು ಉರುಳಿ ಬಿದ್ದಿದೆ.ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಮತ ಮತ್ತು ದ್ರತಿಕಾ ಅಪಘಾತದ ತೀವ್ರತೆಗೆ ಕಾರಿನಿಂದ ಹೊರಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಉಳಿದವರನ್ನು ಕುಂದಾಪುರ,ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೈಂದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago