Share

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವು
ಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ಕುವೆಂಪು ಯುನಿರ್ವಸಿಟಿ ಶ್ರೀ ಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜು ಶಂಕರಗಟ್ಟ ಶಿವಮೊಗ್ಗ ದಿಂದ ಪ್ರವಾಸಕ್ಕೆ ಬಂದಿದ್ದ ಬಿ.ಕಾಂ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಟೂರಿಸ್ಟ್ ಬಸ್ ತ್ರಾಸಿ-ಮರವಂತೆ ಬಸ್ ಚಾಲನೆಗೊಂಡ ಅನತಿ ದೂರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಮರವಂತೆ–ತ್ರಾಸಿ ಬೀಚ್‍ನ ಮುಂಭಾಗ ಹೆದ್ದಾರಿ ಪಕ್ಕದಲ್ಲಿ ನಿಂತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಬಸ್‍ನ ಮುಂಭಾಗ ಕುಳಿದ್ದ ಮೂವರು ಸಾವನ್ನಪ್ಪಿದ್ದಾರೆ.ಅದೃಷ್ಟವಶಾತ್ ಸಣ್ಣಪುಟ್ಟ ಗಾಯದೊಂದಿಗೆ ವಿದ್ಯಾರ್ಥಿಗಳು ಪಾರಾಗಿದ್ದಾರೆ.
ಮರವಂತೆ–ತ್ರಾಸಿ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತ್ತಿದ್ದ ಗ್ಯಾಸ್ ಟ್ಯಾಂಕರ್‍ಗೆ ಡಿಕ್ಕಿ ಹೊಡೆದು,ನಿಯಂತ್ರಣ ಕಳೆದುಕೊಂಡ ಬಸ್ ಇನ್ನೊಂದು ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಬಸ್ ಮತ್ತು ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ.ದುರ್ಘಟನೆಯಲ್ಲ್ಲಿ ಬಸ್‍ನಲ್ಲಿ ಸಂಚರಿಸುತ್ತಿದ್ದ ರಘು ಯಾನೆ ಉಮೇಶ ಮತ್ತು ರಂಗನಾಥ್ ಹಾಗೂ ಹೇಮಂತ ಮೃತಪಟ್ಟ ಪಟ್ಟಿದ್ದಾರೆ.ಬಸ್‍ನಲ್ಲಿ ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಸಂಚರಿಸುತ್ತಿದ್ದು.ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟಗಾಯವಾಗಿದೆ.ಘಟನೆ ಸ್ಥಳಕ್ಕೆ ಎಸ್.ಪಿ ಹರಿರಾಮ್ ಶಂಕರ ಮತ್ತು ಡಿವೈಎಸ್‍ಪಿ ಕುಲಕರ್ಣಿ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗಂಗೊಳ್ಳಿ ಠಾಣೆ ಪೆÇಲೀಸ್ ಠಾಣೆ ಪಿಎಸ್‍ಐ ಪವನ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಘಟನೆ ವಿವರ:ಟೂರಿಸ್ಟ್ ಬಸ್ ಮೂಲಕ ಶೈಕ್ಷಣಿಕ ಪ್ರವಾಸವನ್ನು ಕೈಗೊಂಡಿದ್ದ ಕುವೆಂಪು ಯುನಿರ್ವಸಿಟಿ ಶ್ರೀ ಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಹೊನ್ನವಾರಕ್ಕೆ ತೆರಳಿ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್ ಸೌಂದರ್ಯವನ್ನು ಕಾಣಲು ಬುಧವಾರ ಮರವಂತೆಗೆ ಬಂದಿದ್ದರು.ಕಡಲಿನ ಸೌಂದರ್ಯವನ್ನು ಕಣ್ತುಂಬಿಕೊಂಡ ವಿದ್ಯಾರ್ಥಿಗಳು ಉಡುಪಿ ಕೃಷ್ಣ ಮಠಕ್ಕೆ ಬಸ್‍ನಲ್ಲಿ ತೆರಳುತ್ತಿದ್ದಾಗ.ಮರವಂತೆ ತ್ರಾಸಿ ಬೀಚ್ ಮುಂಭಾಗ ಹೆದ್ದಾರಿ ಬದಿಯಲ್ಲಿ ನಿಂತ್ತಿದ್ದ ಲಾರಿಗೆ ನಿಯಂತ್ರಣ ಕಳೆದುಕೊಂಡ ಬಸ್ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದೆ.ಅಪಘಾತದ ರಭಸಕ್ಕೆ ಬಸ್ ಮತ್ತು ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ.ಗ್ಯಾಸ್ ಟ್ಯಾಂಕ್ ಲಾರಿ ಚಾಲಕ ಚಾ ಕುಡಿಯಲು ಹೋಟೆಲ್‍ಗೆ ತೆರಳಿದ ಸಮಯದಲ್ಲಿ ಅಪಘಾತ ನಡೆದಿದ್ದರಿಂದ ಲಾರಿ ಚಾಲಕ ಪಾರಾಗಿದ್ದಾನೆ.ಲಾರಿಗಳು ಮರವಂತೆ-ಬೀಚ್ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಠಿಕಾಣಿ ಹೂಡುತ್ತಿದ್ದು.ಹೆದ್ದಾರಿ ಸವಾರರಿಗೆ ಕಂಟಕವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago