ಕುಂದಾಪುರ:ಬಿಹಾರದಲ್ಲಿ ಬಿಸಿಲಿನ ತೀವ್ರತೆಯಿಂದ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಭೋಜ್‌ಪುರ ಜಿಲ್ಲೆಯಲ್ಲಿ ಆರು ಮಂದಿ, ರೋಹ್ತಾಸ್,ಬಂಕಾ ಮತ್ತು ಅರ್ವಾಲ್‌ನಲ್ಲಿ ತಲಾ ನಾಲ್ವರು,ಔರಂಗಾಬಾದ್‌ನಲ್ಲಿ ಮೂವರು ಮತ್ತು ನಲಂದಾ, ಜಮುಯಿ, ಜಹಾನಾಬಾದ್, ಭಾಗಲ್ಪುರ, ಗಯಾ ಮತ್ತು ಪಾಟ್ನಾದಲ್ಲಿ ತಲಾ ಒಬ್ಬರು ಬಿಸಿಗಾಳಿಗೆ ಸಾವನ್ನಪ್ಪಿದ್ದಾರೆ. ಶನಿವಾರ ಪಾಟ್ನಾದಲ್ಲಿ ಗರಿಷ್ಠ ತಾಪಮಾನ 44.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶೇಖ್‌ಪುರದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಉಷ್ಣಾಂಶ 45.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುಂದಿನ 24 ಗಂಟೆಗಳ ಕಾಲ ಬಿಸಿಗಾಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಸಸಾರಂ ರೈಲು ನಿಲ್ದಾಣದಲ್ಲಿ ಬಿಸಿಲಿನ ಝಳದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಪ್ಲಾಟ್‌ಫಾರ್ಮ್ ಸಂಖ್ಯೆ 7ರಲ್ಲಿ ರೈಲಿಗಾಗಿ ಕಾಯುತ್ತಿದ್ದಾಗ ಒಬ್ಬ ವ್ಯಕ್ತಿ ಸಾವನ್ನಪ್ಪಿದರೆ, ಮತ್ತೊಬ್ಬ ಪ್ರಯಾಣಿಕ ರೈಲು ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸಾವನ್ನಪ್ಪಿದ್ದಾನೆ. ಏತನ್ಮಧ್ಯೆ, 12 ನೇ ತರಗತಿವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಜೂನ್ 24 ರವರೆಗೆ ಮುಚ್ಚುವಂತೆ ಪಾಟ್ನಾ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…