ಕುಂದಾಪುರ:ಕನ್ನಡ ಶಿಕ್ಷಕರನ್ನು ವರ್ಗಾವಣೆ ಮಾಡಬಾರದೆಂದು ಶಾಲಾಭಿವೃದ್ಧಿ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಭೆ ನಡೆಸಿ ನಿರ್ಣಯ ಮಾಡಿ ಹಲವಾರು ಮನವಿಗಳನ್ನು ಶಿಕ್ಷಣ ಇಲಾಖೆಗೆ ಸಲ್ಲಿಸಿದ್ದರು ನಮ್ಮ ಮನವಿಯನ್ನು ಪರಿಗಣಿಸದೆ ಏಕಾಏಕಿ ಆಗಿ ನಮ್ಮ ಶಾಲೆಯಿಂದ ಕನ್ನಡ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ.ಕನ್ನಡ ಶಾಲೆಯಲ್ಲಿ ಕನ್ನಡ ಶಿಕ್ಷರನ್ನು ವರ್ಗಾವಣೆ ಮಾಡುವುದರ ಮುಖೇನ ಅವೈಜ್ಞಾನಿಕವಾದ ಕ್ರಮವನ್ನು ಶಿಕ್ಷಣ ಇಲಾಖೆ ಜಾರಿ ಮಾಡಿದೆ ಎಂದು ಪಡುಕೋಣೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ಯ ಆಪಾದಿಸಿದರು.
ಶಿಕ್ಷಣ ಇಲಾಖೆಯ 2021-2022ನೇ ಸಾಲಿನ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆಯ ನಿಯಮದ ಪ್ರಕಾರ ಪ್ರಸಕ್ತ ಸಾಲಿನಲ್ಲಿ ಪಡುಕೋಣೆ ಶಾಲೆಯ ಕನ್ನಡ ಶಿಕ್ಷಕರನ್ನು ಹೆಚ್ಚುವರಿ ಆಧಾರದ ಮೇಲೆ ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆಯ ಎಸ್‍ಡಿಎಂಸಿ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಯಲ್ಲಿ ಶುಕ್ರವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
2104 ರಿಂದ ನಮ್ಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯರೆ ಇಲ್ಲ ಇವತ್ತಿನ ವರೆಗೂ ಮುಖ್ಯ ಶಿಕ್ಷಕರನ್ನು ನೇಮಕ ಮಾಡದೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸದೆ ಹೆಚ್ಚುವರಿ ಆಧಾರದಲ್ಲಿ ನಮ್ಮ ಶಾಲೆಯ ಶಿಕ್ಷಕರನ್ನು ಇನ್ನೊಂದು ಶಾಲೆಗೆ ವರ್ಗಾವಣೆ ಮಾಡಲಾಗಿದೆ.59 ಮಕ್ಕಳನ್ನು ಹೊಂದಿರುವ ನಮ್ಮ ಶಾಲೆಯಲ್ಲಿ ಕೇವಲ ನಾಲ್ಕು ಶಿಕ್ಷಕರು ಮಾತ್ರ ಭೋಧನೆಯನ್ನು ಮಾಡುತ್ತಿದ್ದಾರೆ ಹೀಗಾದರೆ ಶಿಕ್ಷಣದ ಗುಣಮಟ್ಟ ಕುಸಿದು ಹೋಗಿ ಮಕ್ಕಳ ಭವಿಷ್ಯ ಹಾಳಾಗುವುದರ ಜತೆಗೆ ಶಾಲೆ ಸಹ ಮುಚ್ಚುವಂತಹ ಪರಿಸ್ಥಿತಿ ಬರಲಿದೆ ಎಂದರು.ನಿಯಮದ ಪ್ರಕಾರ ಬೇರೆ ಶಾಲೆಗಳಲ್ಲಿ ಶಿಕ್ಷಕರನ್ನು ಉಳಿಸಿಕೊಳ್ಳಲಾಗಿದೆ ಒಂದೊಂದು ಶಾಲೆಗೆ ಒಂದೊಂದು ರೀತಿ ನಿಯಮವನ್ನು ಇಲಾಖೆ ಜಾರಿಗೆ ಮಾಡಿದರೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಬದುಕು ಏನಾಗಬಹುದು ಎಂದು ಶಿಕ್ಷಣ ಇಲಾಖೆಯನ್ನು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷೆ ಜ್ಯೋತಿ,ಉಪಾಧ್ಯಕ್ಷೆ ಪೂರ್ಣಿಮಾ,ಕಾರ್ಯದರ್ಶಿ ಕಿರಣ್ ಗಾಣಿಗ ಉಪಸ್ಥಿತರಿದ್ದರು.ಕನ್ನಡ ಶಿಕ್ಷಕರನ್ನು ಹೆಚ್ಚುವರಿ ಆಧಾರದಲ್ಲಿ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೆÇೀಷಕರು ಶಿಕ್ಷರಕರ ವರ್ಗಾವಣೆಯನ್ನು ತಡೆ ಹಿಡಿಯುವಂತೆ ಘೋಷಣೆಯನ್ನು ಕೂಗಿದರು.ಸಂಬಂಧಪಟ್ಟ ಇಲಾಖೆಗೆಗೆ ಮನವಿಯನ್ನು ಸಲ್ಲಿಸಲಾಯಿತು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…