ಕುಂದಾಪುರ

ಕಾಂಗ್ರೆಸ್ ಪಕ್ಷ ಅಪಪ್ರಚಾರ,ಸುಳ್ಳು ಭರವಸೆಯಿಂದ ಅಧಿಕಾರಕ್ಕೆ ಬಂದಿದೆ-ಸಂಸದ ರಾಘವೇಂದ್ರ

Share


ಕುಂದಾಪುರ:ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರ 9 ವರ್ಷ ಪೂರೈಸಿದೆ.ಪ್ರಧಾನಿ ಹಾಗೂ ಹಿಂದಿನ ನಮ್ಮ ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕಾಗಿದೆ.ಕಾಂಗ್ರೆಸ್ಸಿನ ಅಪಪ್ರಚಾರ,ಸುಳ್ಳು ಭರವಸೆಯಿಂದ ಅಧಿಕಾರಕ್ಕೆ ಬಂದಿರಬಹುದು.ಗ್ಯಾರಂಟಿಗಳನ್ನು ಜಾರಿಗೆ ತರಲು ನಾವು ಹಕ್ಕೊತ್ತಾಯ ಮಾಡುತ್ತೇವೆ.ಖಾಸಗಿ ಬಸ್‍ಗಳಿಗೂ ಸಬ್ಸಿಡಿ ನೀಡುವ ಮೂಲಕ ಅದರಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು.ಇದಕ್ಕಾಗಿ ರಾಜ್ಯವ್ಯಾಪಿ ಬಿಜೆಪಿಯಿಂದ ಜನಾಂದೋಲನ ನಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಹೆಮ್ಮಾಡಿಯ ಜಯಶ್ರೀ ಹಾಲ್‍ನಲ್ಲಿ ಶುಕ್ರವಾರ ನಡೆದ ಬಿಜೆಪಿ ಹಿರಿಯ ಕಾರ್ಯಕರ್ತರ ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳ ಸಂಯುಕ್ತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
5 ಕೆ.ಜಿ. ಅಕ್ಕಿ ಕೇಂದ್ರ ಕೊಡುತ್ತಿದ್ದು,ಕಾಂಗ್ರೆಸ್ ಭರವಸೆ ಕೊಟ್ಟಂತೆ ಮೋದಿಯವರು ಕೊಡುತ್ತಿರುವ 5 ಕೆ.ಜಿ. ಬಿಟ್ಟು ಹೆಚ್ಚುವರಿ ಆಗಿ 10 ಕೆ.ಜಿ. ಕೊಡಬೇಕಾಗುತ್ತದೆ.ಇದು ಜಾರಿಗೆ ಬರುವವರೆಗೂ ಹೋರಾಟಕ್ಕೆ ಇಳಿಯಬೇಕು.ಪದವಿ,ಡಿಪ್ಲೊಮಾ ಮುಗಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹಣ ಕೊಡುತ್ತೇವೆ ಎಂದವರು ಈಗ 2022-23ರಲ್ಲಿ ಪಾಸ್ ಆದವರು ಎನ್ನುತ್ತಿದ್ದಾರೆ.ಮಹಿಳೆಯರಿಗೆ 2 ಸಾವಿರ ಹಣ ಕೊಡುವ ಯೋಜನೆ ಇನ್ನೂ ಶುರುವಾಗಿಲ್ಲ.ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಷರತ್ತುಗಳನ್ನು ವಿಧಿಸುವ ಮೂಲಕ ಪಲಾಯನ ಮಾಡುತ್ತಿದೆ ಎಂದು ಆರೋಪಿಸಿದರು.ಮುಂಬರುವ ಜಿ.ಪಂ., ತಾ.ಪಂ. ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಕಾರ್ಯ ಆಗಬೇಕಿದೆ ಎಂದು ಸಂಸದರು ಹೇಳಿದರು.
ಅನೇಕ ಮಂದಿ ಹಿರಿಯ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿನ ಲೋಪಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ಮಂಡಲದ ಅಧ್ಯಕ್ಷ ದೀಪಕ್ ಶೆಟ್ಟಿ,ಪ್ರಮುಖರಾದ ಪ್ರಿಯದರ್ಶಿನಿ ದೇವಾಡಿಗ,ಮಾಲತಿ ನಾಯ್ಕ್,ಆನಂದ ಖಾರ್ವಿ,ಸಂತೋಷ್ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago