ಕುಂದಾಪುರ:ಬಿಪರ್ ಜಾಯ್ ಚಂಡಮಾರುತದ ಪ್ರಭಾವದಿಂದ ಕಡಲಬ್ಬರ ಉಂಟಾಗಿ ಬೈಂದೂರು ತಾಲೂಕಿನ ಮರವಂತೆ ಕರಾವಳಿ ಭಾಗದ ಫಿಶರೀಷ್ ರಸ್ತೆ ಬಿರುಕು ಬಿಟ್ಟು ಸಂಪರ್ಕ ಕಡಿತವಾಗಿದ್ದರೂ ಸರಕಾರ ಮತ್ತು ಜನಪ್ರತಿನಿಧಿಗಳು,ಇಲಾಖಾಧಿಕಾರಿಗಳು ಯಾವುದೇ ರೀತಿ ಕ್ರಮಗಳನ್ನು ಕೈಗೊಳ್ಳದೆ ಇದ್ದಿದ್ದರಿಂದ ಬೇಸತ್ತ ಮೀನುಗಾರರು ರಸ್ತೆ ಸಂಪರ್ಕ ವ್ಯವಸ್ಥೆಗಾಗಿ ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ವತಿಯಿಂದ ಸುಮಾರು 10.ಲಕ್ಷ.ರೂ ವ್ಯಯಿಸಿ ಕಡಲ ದಂಡೆಗೆ ಕಲ್ಲುಗಳನ್ನು ಹಾಕಿ ಸುಮಾರು 100.ಮೀಟರ್ ವರೆಗಿನ ಸಂಪರ್ಕ ರಸ್ತೆಯನ್ನು ಪುನರ್ ನಿರ್ಮಾಣ ಮಾಡಿಕೊಂಡಿದ್ದಾರೆ.
ಮರವಂತೆ ಕಡಲ ತಡಿಯ ನಿವಾಸಿಗಳಾದ ಮೀನುಗಾರರಿಗೆ ಫಿಶರೀಷ್ ರಸ್ತೆ ಪ್ರಮುಖ ರಸ್ತೆ ಆಗಿದೆ,ಕಳೆದ ವರ್ಷ ಕಾಣಿಸಿಕೊಂಡಿದ್ದ ತೌಕ್ತೆ ಚಂಡ ಮಾರುತದ ಹೊಡೆತಕ್ಕೆ ಮೀನುಗಾರಿಕಾ ರಸ್ತೆ ಸಂಪೂರ್ಣ ಹಾನಿಯಾಗಿತ್ತು.ಕಡಲ ದಂಡೆ ಸಮುದ್ರ ಪಾಲಾಗಿ ಮೀನುಗಾರರ ಮೂಲಭೂತ ಸೌಕರ್ಯಗಳು ನಾಶವಾಗಿದ್ದರೂ ಸರಕಾರ ಯಾವುದೇ ರೀತಿ ಕ್ರಮಗಳನ್ನು ಕೈಗೊಳ್ಳದೆ ಪರಿಹಾರ ನೀಡದೆ ಅಸಡ್ಡೆಯನ್ನು ತೋರಿದೆ.ಈ ಬಾರಿ ಕಾಣಿಸಿಕೊಂಡಿದ್ದ ಬಿಪರ್ ಜಾಯ್ ಚಂಡ ಮಾರುತದಿಂದ ಮತ್ತೆ ಮರವಂತೆ ಫಿಶರೀಷ್ ರಸ್ತೆಗೆ ಹಾನಿಯಾಗಿದ್ದರೂ ಜನಪ್ರತಿನಿಧಿಗಳು,ಅಧಿಕಾರಿಗಳು ಯಾವುದೇ ರೀತಿ ಕ್ರಮಗಳನ್ನು ಕೈಗೊಂಡಿರಲಿಲ್ಲ. ಚಂಡಮಾರುತದ ಪ್ರಭಾವದಿಂದ ಕರಾವಳಿ ಭಾಗದ ಮರವಂತೆಯಲ್ಲಿ ಹಾನಿಯಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಂದರು ಮತ್ತು ಮೀನುಗಾರಿಕಾ ಸಚಿವರು ಇತ್ತ ಕಡೆ ದೃಷ್ಟಿಯನ್ನು ಹಾಯಿಸದೆ ತಮಗೂ ಕಡಲ್ಕೊರೆತಕ್ಕೂ ಯಾವುದೆ ರೀತಿ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…