ಬೆಂಗಳೂರು :ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮುಖಭಂಗಕ್ಕೀಡಾಗಿರುವ ಬಿಜೆಪಿ ಈಗ ಲೋಕಸಭೆ ಚುನಾವಣೆಗಾಗುವಾಗ ಪಕ್ಷದ ವರ್ಚಸ್ಸನ್ನು ಮೇಲೆತ್ತಬಲ್ಲ ರಾಜ್ಯಾಧ್ಯಕ್ಷನನ್ನು ಹುಡುಕುತ್ತಿದೆ. ಜುಲೈ 3ರಂದು ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು,ಅದಕ್ಕೂ ಮೊದಲು ರಾಜ್ಯಾಧ್ಯಕ್ಷ ಮತ್ತು ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಯಲ್ಲಿ ಪ್ರಕ್ರಿಯೆ ಶುರುವಾಗಿದೆ.
ಸದ್ಯಕ್ಕೆ ರಾಜ್ಯಾಧ್ಯಕ್ಷರಾಗಿರುವ ನಳಿನ್‌ಕುಮಾರ್ ಕಟೀಲು ಅವರ ಅವಧಿ ಮುಗಿದಿದ್ದು ಮತ್ತೆ ಅವರನ್ನೇ ಮುಂದುವರಿಸುವ ಉದ್ದೇಶ ಬಿಜೆಪಿ ಹೈಕಮಾಂಡ್‌ಗೆ ಇಲ್ಲ. ಸ್ವತಹ ನಳಿನ್‌ಕುಮಾರ್ ಕಟೀಲು ಜವಾಬ್ದಾರಿಯಿಂದ ಕಳಚಿಕೊಳ್ಳಲು ರೆಡಿಯಾಗಿದ್ದಾರೆ.
ಅರುವತ್ತೈದು ಸ್ಥಾನಕ್ಕೆ ಕುಸಿದಿರುವ ಬಿಜೆಪಿ ಚುನಾವಣೆ ಮುಗಿದು ಎರಡು ತಿಂಗಳಾಗುತ್ತಾ ಬಂದಿದ್ರೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಮಾಡಿಲ್ಲ.ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಹೆಸರುಗಳ ಪರಿಶೀಲನೆ ನಡೆಯುತ್ತಿದೆ.ಏಳು ಮಂದಿ ನಾಯಕರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ.ಈ ಪೈಕಿ ಒಬ್ಬರು ವಿಪಕ್ಷ ನಾಯಕ ಹಾಗೂ ಇನ್ನೊಬ್ಬರು ರಾಜ್ಯಾಧ್ಯಕ್ಷ ಆಗಲಿದ್ದಾರೆ.
ಆರ್.ಅಶೋಕ್, ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ಬಿ.ವೈ. ವಿಜಯೇಂದ್ರ,ಸೋಮಣ್ಣ, ಶ್ರೀರಾಮುಲು ಹಾಗೂ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಹೆಸರು ಈ ಲಿಸ್ಟ್‌ನಲ್ಲಿದೆ ಎನ್ನಲಾಗುತ್ತಿದೆ.
ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಸೈಡ್‌ಲೈನ್ ಮಾಡಿದ ಕಾರಣಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ ಎಂಬ ಕಾರಣಕ್ಕಾಗಿ ಈಗ ಅವರ ಪುತ್ರ ವಿಜಯೇಂದ್ರ ಹೆಸರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಪರಿಗಣಿಸಬೇಕು ಎಂಬ ಪ್ರಬಲ ಒತ್ತಾಯ ಕೇಳಿ ಬರುತ್ತಿದೆ. ಆದರೆ ಪಕ್ಷದಲ್ಲಿ ಬಹಳ ಹಿರಿಯರಾಗಿರುವ ಹಾಗೂ ಒಕ್ಕಲಿಗ ನಾಯಕರಾದ ಸಿ.ಟಿ. ರವಿ, ಆರ್. ಅಶೋಕ್, ಶೋಭಾ ಕರಂದ್ಲಾಜೆ ಅವರಿಗೆ ಜವಾಬ್ದಾರಿ ನೀಡಿದರೆ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂಬುದು ಇನ್ನೊಂದ ತರ್ಕ.
ಹಿಂದುಳಿದ ಸಮುದಾಯದ ಶ್ರೀರಾಮುಲು ಅಥವಾ ಸುನಿಲ್ ಕುಮಾರ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಬೇಕು ಎಂಬ ಬೇಡಿಕೆ ಇದೆ.ಇವೆಲ್ಲದರ ನಡುವೆ ವಿ.ಸೋಮಣ್ಣ ಹೈಕಮಾಂಡ್ ಆದೇಶದ ಪ್ರಕಾರ ವರುಣಾ ಮತ್ತು ಚಾಮರಾಜನಗರದಲ್ಲಿ ಸ್ಪರ್ಧೆ ಮಾಡುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಸವಾಲಿಗೆ ಒಡ್ಡಿದ್ದರು.ಹಾಗಾಗಿ ಸೋಮಣ್ಣ ಹೆಸರು ಕೂಡ ಪ್ರಬಲವಾಗಿ ಕೇಳಿ ಬರ್ತಿದೆ. ಒಂದು ಅವಕಾಶವನ್ನ ಕೊಟ್ಟು ನೋಡಿ ಪಕ್ಷವನ್ನ ಕಟ್ಟುತ್ತೇನೆ ಎಂದು ವಿ ಸೋಮಣ್ಣ ಹೈಕಮಾಂಡ್ ನಾಯಕರ ಮುಂದೆ ತಮ್ಮ ಆಸೆಯನ್ನ ವ್ಯಕ್ತಪಡಿಸಿದ್ದಾರೆ.
ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆಗೆ ಆಯ್ಕೆ ಪ್ರಕ್ರಿಯೆಯಲ್ಲಿ ಜಾತಿ ರಾಜಕಾರಣವೂ ಬಿಜೆಪಿಯಲ್ಲಿ ಮುನ್ನೆಲೆಗೆ ಬರುವ ಲಕ್ಷಣಗಳಿವೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…