ಕುಂದಾಪುರ

ಶಿಕ್ಷಕರ ವರ್ಗಾವಣೆ ಪಡುಕೋಣೆ ಶಾಲೆಯಲ್ಲಿ ಮುಂದುವರಿದ ಪೋಷಕರ ಪ್ರತಿಭಟನೆ

Share

ಕುಂದಾಪು:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆಯಲ್ಲಿ ಕನ್ನಡ ಶಿಕ್ಷಕರನ್ನು ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಮಕ್ಕಳ ಪೋಷಕರು ಕೈಗೊಂಡಿದ್ದ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ.ಶಿಕ್ಷಕರನ್ನು ನೇಮಕ ಮಾಡದೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹಠ ಹಿಡಿದು ಕುಳಿತ ಪೋಷಕರ ಪ್ರತಿಭಟನೆಯಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದೆ ನಾಲ್ಕು ದಿನಗಳೆ ಕಳೆದು ಹೋಗಿದ್ದು ಮಕ್ಕಳ ಭವಿಷ್ಯ ಅತಂತ್ರವಾಗಿದೆ.

ಕನ್ನಡ ಶಿಕ್ಷಕರನ್ನು ವರ್ಗಾವಣೆ ಮಾಡಬಾರದೆಂದು ಮಡುಕೋಣೆ ಶಾಲೆಯ ಶಾಲಾಭಿವೃದ್ಧಿ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಭೆ ನಡೆಸಿ ನಿರ್ಣಯ ಮಾಡಿ ಹಲವಾರು ಮನವಿಗಳನ್ನು ಶಿಕ್ಷಣ ಇಲಾಖೆಗೆ ಸಲ್ಲಿಸಿದ್ದರು ಶಿಕ್ಷಣ ಇಲಾಖೆ ಯಾವುದೇ ರೀತಿ ಪ್ರತಿಕ್ರಿಯೆನ್ನು ನೀಡಿಲ್ಲ ಎಂದು ಎಸ್‍ಡಿಎಂಸಿ ಸದಸ್ಯರ ಆರೋಪವಾಗಿದೆ.
ಹೆಚ್ಚುವರಿ ನಿಯಮದ ಆಧಾರದ ಮೇಲೆ ಪಡುಕೋಣೆ ಶಾಲೆಯ್ಲಿ ಕನ್ನಡ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ.ಕನ್ನಡ ಶಾಲೆಯಲ್ಲಿ ಕನ್ನಡ ಶಿಕ್ಷರನ್ನು ವರ್ಗಾವಣೆ ಮಾಡಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಲಿದೆ ಎನ್ನುವುದು ಮಕ್ಕಳ ಪೋಷಕರ ಆತಂಕ.
ಶಿಕ್ಷಣ ಇಲಾಖೆಯ 2021-2022ನೇ ಸಾಲಿನ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆಯ ನಿಯಮದ ಪ್ರಕಾರ ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ಕನ್ನಡ ಶಾಲೆಗಳಲ್ಲಿ ಶಿಕ್ಷಕರ ವರ್ಗಾವಣೆ ಪರ್ವ ಆರಂಭಗೊಂಡಿದ್ದು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಶಿಕ್ಷಕರ ವರ್ಗಾವಣೆಯನ್ನು ಖಂಡಿಸಿ ಪಡುಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪೋಷಕರು ಕೈಂಗೊಡಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ.ಶಾಲೆಗೆ ಶಿಕ್ಷರನ್ನು ನೇಮಕ ಮಾಡದೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹಠಕ್ಕೆ ಬಿದ್ದಿರುವ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ನಾಲ್ಕು ದಿನಗಳು ಕಳೆದು ಹೋಗಿದೆ.ಶಾಲೆ ಬಾಗಿಲು ತೆರೆದಿದ್ದರು ಮಕ್ಕಳು ಮಾತ್ರ ಶಾಲೆ ಕಡೆ ಬರುತ್ತಿಲ್ಲ.ಶಿಕ್ಷಣ ಇಲಾಖೆ ಗೊಂದಲದಿಂದ ಗ್ರಾಮೀಣ ಪ್ರದೇಶದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿದೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago