ಕುಂದಾಪುರ:ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಗುಡ್ ಬೈ ಹೇಳಿದ ಗ್ರಾಮೀಣ ಪ್ರದೇಶದ ಕೃಷಿಕರು ಯಾಂತ್ರಿಕ ಕೃಷಿಯತ್ತಾ ಮುಖ ಮಾಡಿದ್ದಾರೆ.ಛಾಪೆ ಮಾದರಿ ಕೃಷಿ ಪದ್ಧತಿಯನ್ನು ಅಳವಡಿಕೆ ಮಾಡಿಕೊಂಡು ಯಂತ್ರ ಶ್ರೀ ಬೇಸಾಯಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದಾರೆ.ಯಂತ್ರ ಶ್ರೀ ಬೇಸಾಯಕ್ಕೆ ಪ್ರೋತ್ಸಾಹ ಧನವನ್ನು ನೀಡಬೇಕ್ಕೆನ್ನುವುದು ರೈತರ ಬೇಡಿಕೆ ಆಗಿದೆ.
ಮುಂಗಾರಿನ ಆರಂಭ ವಿಳಂಬವಾಗಿದ್ದರೂ ಜೂನ್ ಎರಡನೇ ವಾರದಲ್ಲಿ ಬಿರುಸಾಗಿ ಮಳೆ ಸುರಿದಿದ್ದರಿಂದ ಕೆರೆ,ಹಳ್ಳಕೊಳ್ಳ ತುಂಬಿಕೊಂಡಿದೆ ತೋಡುಗಳಲ್ಲಿ ನೀರು ಹರಿಯುತ್ತಿದೆ.ಕುಂದಾಪುರ ತಾಲೂಕಿನ ಆಲೂರು,ಹೊಸಾಡು,ಹಕ್ಲಾಡಿ,ಹೆಮ್ಮಾಡಿ,ಮರವಂತೆ,ನಾವುಂದ,ಕಡಿಕೆ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಉಳುಮೆ ಕಾರ್ಯದಲ್ಲಿ ಕೃಷಿಕರು ನಿರತರಾಗಿದ್ದಾರೆ.ಜೂನ್ ತಿಂಗಳು ಕೊನೆ ಹಂತಕ್ಕೆ ತಲುಪಿದ್ದರು ಬಹುತೇಕ ಕಡೆಗಳಲ್ಲಿ ನಾಟಿ ಕಾರ್ಯ ಇನ್ನೂ ಆರಂಭವಾಗಿಲ್ಲ.ನಾಟಿ ಕಾರ್ಯಕ್ಕೆ ಚಾಪೆ ಮಾದರಿಯ ಸಸಿ ಮಡಿಗಳನ್ನು ಈಗಾಗಲೇ ಅನೇಕ ರೈತರು ಸಿದ್ಧಪಡಿಸಿಕೊಂಡಿದ್ದಾರೆ.ಇನ್ನೊಂದು ವಾರದಲ್ಲಿ ನಾಟಿ ಕಾರ್ಯ ಆರಂಭವಾಗಲಿದ್ದು ಗದ್ದೆಗಳನ್ನು ಹದ ಮಾಡುವ ಕಾರ್ಯದಲ್ಲಿ ರೈತರು ತೊಡಗಿಕೊಂಡಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…