ಕುಂದಾಪುರ:ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು,ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಬೈಂದೂರು,ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೈಂದೂರು ವತಿಯಿಂದ ಎಸ್‍ಎಸ್‍ಎಲ್‍ಸಿ ಫಲಿತಾಂಶ-2023 ಸಂಭ್ರಮ ಮತ್ತು ಪ್ರತಿಭಾನಿತ್ವ ವಿದ್ಯಾರ್ಥಿಗಳಿಗೆ ಸನ್ಮಾನ ಅಭಿನಂದನಾ ಕಾರ್ಯಕ್ರಮ ಶ್ರೀಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಶಿಕ್ಷಕರು ಮಕ್ಕಳಿಗೆ ಸ್ಫೂರ್ತಿದಾಯಕರಾದರೆ ಮಾತ್ರ ಹೆಚ್ಚಿನ ರೀತಿಯಲ್ಲಿ ಮಕ್ಕಳು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.
ಕೊಲ್ಲೂರು ದೇವಳದ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ,ವಿದ್ಯಾಂಗ ಉಪ ನಿರ್ದೇಶಕ ಗಣಪತಿ.ಕೆ,ಕ್ಷೇತ್ರ ಶಿಕ್ಷಣಾಧಿಕಾರಿ ಕುಂದಾಪುರ ಕಾಂತರಾಜು,ಬೈಂದೂರು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘ ಬೈಂದೂರು ಅಧ್ಯಕ್ಷ ಆನಂದ ಮುದ್ದೋಡಿ,ಹಿಂದೂ ಅಭ್ಯುದಯ ಸಂಘ ನಾವುಂದ ಅಧ್ಯಕ್ಷ ಶಶಿಧರ ಶೆಟ್ಟಿ,ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಬೈಂದೂರು ಎಂಜಿ ಮಂಜುನಾಥ,ಬಿಆರ್‍ಪಿ ಸುಧಾಕರ ದೇವಾಡಿಗ,ವೆಂಕಟೇಶ್ ಶಾಸ್ತ್ರಿ ಉಪಸ್ಥಿತರಿದ್ದರು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಶಾಲೆಗಳನ್ನು ಹಾಗೂ 9 ಶಾಲೆಗಳ ಮುಖ್ಯೋಪಾಧ್ಯಾಯರನ್ನು,ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ನೋಡಲ್ ಅಧಿಕಾರಿ ಕರುಣಾಕರ್ ಶೆಟ್ಟಿ ಸ್ವಾಗತಿಸಿದರು.ಶಿಕ್ಷಕ ಶಿವರಾಮ ಮಧ್ಯಸ್ಥ ನಿರೂಪಿಸಿದರು.ಬಿಆರ್‍ಪಿ ಮಂಜುನಾಥ್ ನಾಯಕ್ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…