ಕುಂದಾಪುರ:ವಿಶ್ವ ವೈದ್ಯರ ದಿನಾಚರಣೆಯ ಅಂಗವಾಗಿ ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿಯವರು,ಸಿದ್ಧಾಪುರದಲ್ಲಿ ಕಳೆದ ಎರಡುವರೆ ದಶಕಗಳಿಂದ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಜಗದೀಶ್ ಶೆಟ್ಟಿ ಹಾಗೂ ಸಿದ್ಧಾಪುರ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ದೀಕ್ಷಾ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.
ವಿಶ್ರಾಂತ ಉಪನ್ಯಾಸಕರಾದ ಡಾ. ಶ್ರೀಕಾಂತ್ ರಾವ್ ಮಾತನಾಡಿ,ವೈದ್ಯೋ ನಾರಾಯಣ ಹರಿ ಎಂಬಂತೆ ದೇವರು ಕೊಡುವುದು ಜನ್ಮ,ವೈದ್ಯರು ನೀಡುವುದು ಮರುಜನ್ಮ.ರೋಗಿಗಳ ಕಣ್ಣಿಗೆ ವೈದ್ಯರು ದೇವರ ರೂಪದಲ್ಲಿ ಕಾಣುತ್ತಾರೆ ರೋಗಿಯ ಆತ್ಮಸ್ಥೈರ್ಯ ದಿಂದ ಮಾನಸಿಕವಾಗಿ ಸದೃಢರಾಗಿ ಆಯುಷ್ಯ ವ್ರದ್ದಿಯಾಗುತ್ತದೆ ಎಂದರು.
ಉದ್ಯಮಿಗಳಾದ ಶ್ರೀಕಾಂತ್ ನಾಯಕ್,ಎಸ್.ಪಾಂಡುರಂಗ ಪೈ,ಟಿ.ಜಿ.ಪಾಂಡುರಂಗ ಪೈ, ಭೋಜರಾಜ್ ಶೆಟ್ಟಿ,ಆರೋಗ್ಯ ಕೇಂದ್ರದ ಕಿರಣ್ ಶೆಟ್ಟಿ,ಶಿಕ್ಷಕ ಪ್ರತಾಪ್ ಕಿಣಿ,ರಾಜೇಂದ್ರ ಬೆಚ್ಚಳ್ಳಿ ಉಪಸ್ಥಿತರಿದ್ದರು. ಆರೋಗ್ಯ ಕಾರ್ಯಕರ್ತರು ಸಿಬ್ಬಂದಿ,ಆಂಗನವಾಡಿ ಶಿಕ್ಷಕರು ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…