ಕುಂದಾಪುರ

ಮಾದಕ ವಸ್ತುಗಳ ಚಟಕ್ಕೆ ಬಿದ್ದರೆ ಜೀವನ ಸಂಪೂರ್ಣ ಹಾಳಾಗುತ್ತದೆ

Share


ಕುಂದಾಪುರ:ಮಾದಕ ವಸ್ತುಗಳ ಚಟಕ್ಕೆ ಬಿದ್ದರೆ ಜೀವನ ಸಂಪೂರ್ಣ ಹಾಳಾಗುವುದು ಮಾತ್ರವಲ್ಲದೆ ತನ್ನ ಸಂಸಾರವನ್ನು ಬೀದಿಗೆ ಹಾಕುವ ಪರಿಸ್ಥಿತಿ ಉದ್ಭವಾಗಲಿದೆ.ಕ್ಷಣಿಕ ಸುಖಕ್ಕಾಗಿ ಯುವ ಜನಾಂಗ ಗಾಂಜಾ,ಧೂಮಪಾನ,ತಂಬಾಕು ಸೇವನೆ ಅಂತಹ ಮಾದಕ ವಸ್ತುಗಳ ದಾಸರಾಗುತ್ತಿದ್ದು,ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಜನಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಸತೀಶ ಎಂ.ನಾಯಕ್ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್,ಜಿಲ್ಲಾ ಜನಜಾಗೃತಿ ವೇದಿಕೆ,ಜನಜಾಗೃತಿ ವೇದಿಕೆ ತ್ರಾಸಿ ವಲಯದ ವತಿಯಿಂದ ಗಂಗೊಳ್ಳಿ ಶ್ರೀವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆದ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲಾ ಕಾಲೇಜು ಸುತ್ತಮುತ್ತ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಅದರ ಮಾರಾಟವನ್ನು ತಡೆಯುವಲ್ಲಿ ಶ್ರಮಿಸಬೇಕು ಎಂದರು.
ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಎಚ್‍ಒ ನಯನಾ ಆರೋಗ್ಯ ಮಾಹಿತಿ ನೀಡಿದರು. ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ,ತ್ರಾಸಿ ವಲಯ ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ,ತ್ರಾಸಿ ವಲಯ ಮೇಲ್ವಿಚಾರಕ ಚಂದ್ರ ನಾಯ್ಕ್, ಸೇವಾ ಪ್ರತಿನಿಧಿ ವನಜಾ,ಪಂಚಗಂಗಾವಳಿ ಒಕ್ಕೂಟದ ಅಧ್ಯಕ್ಷೆ ಉಷಾ,ಕಾರ್ಯದರ್ಶಿ ಮಾಲಾಶ್ರೀ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago