ಕುಂದಾಪುರ

ಗಂಗೊಳ್ಳಿ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ

Share


ಕುಂದಾಪುರ:ಸೇವಾ ಕಾರ್ಯಗಳ ಮೂಲಕ ರೊಟರಿ ಕ್ಲಬ್ ಗಂಗೊಳ್ಳಿ ಉತ್ತಮವಾದ ಕೆಲಸಗಳನ್ನು ಮಾಡುತ್ತಿದೆ ಎಂದು ರೋಟರಿ ಜಿಲ್ಲೆ 3182 ವಲಯ 1ರ ಅಸಿಸ್ಟೆಂಟ್ ಗವರ್ನರ್ ಡಾ.ಸಂದೀಪ ಶೆಟ್ಟಿ ಹೇಳಿದರು.
ಗಂಗೊಳ್ಳಿ ಸ.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ನಡೆದ ಗಂಗೊಳ್ಳಿ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಗಂಗೊಳ್ಳಿ ರೋಟರಿ ಕ್ಲಬ್‍ನ ನೂತನ ಅಧ್ಯಕ್ಷ ಎಂ.ನಾಗೇಂದ್ರ ಪೈ ಅವರಿಗೆ ನಿರ್ಗಮಿತ ಅಧ್ಯಕ್ಷೆ ಸುಗುಣ ಆರ್.ಕೆ. ಮತ್ತು ನೂತನ ಕಾರ್ಯದರ್ಶಿ ಕೃಷ್ಣ ಪೂಜಾರಿ ಅವರಿಗೆ ನಿರ್ಗಮಿತ ಕಾರ್ಯದರ್ಶಿ ಚಂದ್ರಕಲಾ ಅಧಿಕಾರ ಹಸ್ತಾಂತರಿಸಿದರು.ಗಂಗೊಳ್ಳಿ ರೋಟರಿ ಕ್ಲಬ್ಬಿನ ಪತ್ರಿಕೆ ಗಂಗಾ,ವಲಯ ಸೇನಾನಿ ಪ್ರದೀಪ ಯಡಿಯಾಳ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ರ್ಯಾಂಕ್ ವಿಜೇತ ಮತ್ತು ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕುಂದಾಪುರ ಬಿ.ಬಿ.ಹೆಗ್ಡೆ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಚೇತನ ಶೆಟ್ಟಿ ಕೊವಾಡಿ ಉಪಸ್ಥಿತರಿದ್ದರು.ಸುಗುಣ ಆರ್.ಕೆ. ಸ್ವಾಗತಿಸಿದರು.ಕೆ.ರಾಮನಾಥ ನಾಯಕ್ ನಿರ್ವಹಿಸಿದರು.ಕೃಷ್ಣ ಪೂಜಾರಿ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago