ಕುಂದಾಪುರ:ಕೊಲ್ಲೂರು ದೇವಿಯ ದರ್ಶನಕ್ಕೆ ಜೂನ್ 4ರಂದು ಬಂದಿದ್ದ ಮಹಿಳೆಯ ಪರ್ಸ್ ನಿಂದ ಕಳುವಾಗಿದ್ದ ಹದಿಮೂರೂವರೆ ಪವನ್ ಚಿನ್ನಾಭರಣ ಕಳವಿಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಬಸ್ಸೊಂದರಲ್ಲಿ ಕೆಲಸ ಮಾಡುತ್ತಿದ್ದ ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) ನನ್ನು ಬಂಧಿಸಿದ ಪೊಲೀಸರು ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಜಾಡನ್ನು ಬೆನ್ನತ್ತಿದ ಪೊಲೀಸರು ಸಿಸಿ ಕೆಮೆರಾದಲ್ಲಿ ಸೆರೆಯಾಗಿದ್ದ ದೃಶ್ಯಗಳನ್ನು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಎಗರಿಸಿದ್ದ ಎನ್ನಲಾದ 7½ ಪವನ್ ಚಿನ್ನದ ಚೈನ್,3 ಪವನ್ ತೂಕದ ಎರಡು ಚಿನ್ನದ ಬಳೆ,1½ ಪವನ್ ಚಿನ್ನದ ಚೈನ್, ½ ಪವನ್ ಚಿನ್ನದ ಬಳೆ,1 ಪವನ್ ತೂಕದ 4 ಜೊತೆ ಚಿನ್ನದ ಕಿವಿ ಓಲೆ ಸಹಿತ ಒಟ್ಟು 13½ ಪವನ್ (108 ಗ್ರಾಂ) ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…