ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚಗೋಡು ಟರ್ಟಲ್ ಬೀಚ್ ರೆಸಾರ್ಟ್ ಹತ್ತಿರ ನಾಗರಾಜ ಮತ್ತು ಸುಭಾಷ್ ಖಾರ್ವಿ ಮನೆ ಹಾಗೂ ಕಂಚಗೋಡು ಕೃಷ್ಣ ಖಾರ್ವಿ ಮನೆ ಬಳಿ ಚರಂಡಿ ಅವ್ಯವಸ್ಥೆಯಿಂದ ಮಳೆ ನೀರು ಮನೆ ಎದುರು ತುಂಬಿಕೊಂಡಿದೆ.ಚರಂಡಿ ದುರಸ್ಥಿ ಮಾಡಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಳೆಯಿಂದ ಮನೆಗೆ ಹಾನಿ:
ಬಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ನವಗ್ರಾಮ ಕಾಲೋನಿ ಶೇಷು ಪೂಜಾರಿ ಅವರ ಮನೆ ಹೆಂಚು ಹಾರಿ ಹೋಗಿದ್ದು ನಷ್ಟ ಸಂಭವಿಸಿದ ಘಟನೆ ಬುಧವಾರ ನಡೆದಿದೆ.ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಧಾರಕಾರ ಮಳೆ ಮನೆ ಗೋಡೆ ಕುಸಿತ:
ಬುಧವಾರ ಸುರಿದ ಬಾರಿ ಮಳೆಗೆ ಗಂಗೊಳ್ಳಿ ಗ್ರಾಮದ ಬಾವಿಕಟ್ಟೆ ನಿವಾಸಿ ಶಕುಂತಲಾ ಎನ್ನುವವರ ಮನೆ ಗೋಡೆ ಕುಸಿತಗೊಂಡಿದ್ದು ಆರ್ಥಿಕ ನಷ್ಟ ಉಂಟಾಗಿದೆ.ಗಂಗೊಳ್ಳಿ ಠಾಣೆಯ ಪಿಎಸ್‍ಐ ಹರೀಶ್ ನಾಯ್ಕ್ ಮತ್ತು ಸಿಬ್ಬಂದಿಗಳು ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಸ್ತೆಗೆ ಅಡ್ಡಲಾಗಿ ಬಿದ್ದ ಮರ ತೆರವು:
ತ್ರಾಸಿ-ಗಂಗೊಳ್ಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಮೇಲೆ ಧರೆಗುರುಳಿದ ಮರವನ್ನು ಸ್ಥಳೀಯರು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಗಾಳಿ ಮಳೆಗೆ ನೆಲಕ್ಕೆ ಉರುಳಿದ ವಿದ್ಯುತ್ ಕಂಬ:
ಧಾರಕರವಾಗಿ ಸುರಿದ ಭಾರಿ ಮಳೆ ಗಾಳಿಗೆ ವಿದ್ಯುತ್ ಕಂಬ ನೆಲಕ್ಕೆ ಉರುಳಿದ ಘಟನೆ ಬೈಂದೂರು ತಾಲೂಕಿನ ನಾಡ ಗುಡ್ಡೆಅಂಗಡಿಯಲ್ಲಿ ಬುಧವಾರ ನಡೆದಿದೆ.ಮೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಂಬವನ್ನು ದುರಸ್ತಿಗೊಳಿಸಿ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಸರಿಪಡಿಸಿದರು.
ಹೊಸಾಡು ಬೈಲು ಜಲಾವೃತ:ಸಮಸ್ಯೆ ಬಗೆಹರಿಸುವಂತೆ ಆಗ್ರಹ:
ಎಡಬಿಡದೆ ಸುರಿದ ಬಾರಿ ಮಳೆಗೆ ಹೊಸಾಡು ಬೈಲು ಜಲಾವೃತವಾಗಿದ್ದು ಗದ್ದೆಯಲ್ಲಿ ನಾಟಿ ಮಾಡಿದ ಸಸಿಗಳು ನೀರಿನಲ್ಲಿ ಮುಳುಗಿದೆ.ರಾಷ್ಟ್ರೀಯ ಹೆದ್ದಾರಿ ಚರಂಡಿ ನೀರು ತೋಡಿನ ಮೂಲಕ ಬೈಲಿಗೆ ನುಗ್ಗುತ್ತಿರುವುದರಿಂದ ಸಮಸ್ಯೆ ಸೃಷ್ಟಿಯಾಗುತ್ತಿದೆ ಎಂದು ರೈತರು ದೂರಿದ್ದಾರೆ.ಚರಂಡಿ ನೀರಿನ ಸಮಸ್ಯೆಯನ್ನು ಬಗೆ ಹರಿಸುವಂತೆ ಆಗ್ರಹಿಸಿದ್ದಾರೆ.
ಬುಧವಾರ ಸುರಿದ ಧಾರಕಾರ ಮಳೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕಿನಾದ್ಯಂತ ವ್ಯಾಪಕ ನಷ್ಟ ಉಂಟಾಗಿದ್ದು ಜೀವ ಹಾನಿ ಕೂಡ ಸಂಭವಿಸಿದೆ.
(ರಸ್ತೆಗೆ ಅಡ್ಡಲಾಗಿ ಬಿದ್ದ ಮರ ತೆರವು)
(ಧಾರಕಾರ ಮಳೆ ಮನೆ ಗೋಡೆ ಕುಸಿತ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…