ಕುಂದಾಪುರ:ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯಾಡಿ ಸಮೀಪದ
ರಸ್ತೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಸ್ಕೂಟಿ ರಸ್ತೆ ಪಕ್ಕದಲ್ಲಿದ್ದ ಕೆರೆಗೆ ಬಿದ್ದು ಸವಾರರಾದ ಉದ್ಯಮಿ ದಿವಾಕರ ಶೆಟ್ಟಿ (65) ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ದಿವಾಕರ ಶೆಟ್ಟಿ ಅವರು ಸ್ಕೂಟಿಯಲ್ಲಿ ಮನೆಗೆ ಸಂಚರಿಸುವ ವೇಳೆ ಸ್ಕಿಡ್ ಆಗಿ ಸ್ಕೂಟಿ ಸಮೇತ ಕೆರೆಗೆ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ.
ಮಲ್ಯಾಡಿ ರಸ್ತೆ ಪಕ್ಕದಲ್ಲಿರುವ ಬೃಹತ್ ಕೆರೆಗೆ ಯಾವುದೇ ರೀತಿಯ ತಡೆಗೋಡೆ ಇಲ್ಲದ ಕಾರಣ 15 ರಿಂದ 20 ಅಡಿ ಆಳದ ಕೆರೆಗೆ ಸ್ಕೂಟರ್ ಸಮೇತ ದಿವಾಕರ ಶೆಟ್ಟಿ ಬಿದಿದ್ದಾರೆ.ಸಮಯ ಮೀರಿದರು ಮನೆಗೆ ಬಾರದಿರುವ ಕಾರಣ ಮನೆಯವರು ಸಂಬಂಧಪಟ್ಟ ಸ್ಥಳದಲ್ಲಿ ಹುಡುಕಾಟ ಮಾಡಿದ್ದರು ಅಲ್ಲಿ ಪತ್ತೆ ಆಗದಿರುವ ಹಿನ್ನೆಲೆಯಲ್ಲಿ ಸ್ಥಳೀಯರ ಸಹಕಾರದೊಂದಿಗೆ ತೀವೃವಾಗಿ ಹುಡುಕಾಟ ಮುಂದುವರಿಸಿದಾಗ ಸಮೀಪದ ಕೆರೆಯಲ್ಲಿ ಸ್ಕೂಟಿ ಪತ್ತೆಯಾಗಿರುವುದನ್ನು ಗಮನಿಸಿದ್ದಾರೆ.ಕೂಡಲೇ ಪೊಲೀಸರು ,ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದಾರೆ.ಘಟನೆ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಕೆರೆಗೆ ಧುಮುಕಿ ಸ್ಕೂಟರ್ ಅನ್ನು ಮೇಲಕ್ಕೆ ಎತ್ತಿದರು.ಸ್ಕೂಟಿ ಸವಾರನಿಗಾಗಿ ಕೆರೆಯಲ್ಲಿ ಹುಡುಕಾಟ ಮುಂದುವರೆಸಿದಾಗ ನಸುಕಿನ ಜಾವ 1:30ರ ಸುಮಾರಿಗೆ ಕೆರೆಯಲ್ಲಿ ದಿವಾಕರ ಶೆಟ್ಟಿ ಅವರ ಮೃತ ದೇಹ ಪತ್ತೆ ಆಗಿದೆ ಎಂದು ತಿಳಿದುಬಂದಿದೆ.ಈಶ್ವರ್ ಮಲ್ಪೆ ಜೊತೆ ಕೋಟದ ಜೀವನ್ ಮಿತ್ರ ತಂಡ ಸಾಥ್ ನೀಡಿದ್ದು.ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…