ಕುಂದಾಪುರ

ಗದ್ದೆಯಲ್ಲಿ ಸಿಲುಕಿಕೊಂಡ ಪವರ್ ಟಿಲ್ಲರ್

Share


ಕುಂದಾಪುರ:ಹೊಸಾಡು ಗ್ರಾಮದ ವಳನಾಡು ಎಂಬಲ್ಲಿ ಯಶೋಧ ಮೊಗವೀರ ಅವರ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದಾಗ ಜಲ ಜೀವನ್ ಮಿಷನ್ ಪೈಪ್‍ಲೈನ್ ಹೊಂಡದಲ್ಲಿ ಪವರ್ ಟಿಲ್ಲರ್ ಸಿಕ್ಕಿ ಹಾಕಿಕೊಂಡ ಘಟನೆ ಬುಧವಾರ ನಡೆದಿದೆ.ಹರಸಾಹಸ ಪಟ್ಟು ರೈತರು ಪವರ್ ಟಿಲ್ಲರ್‍ನ್ನು ಮೇಲಕ್ಕೆ ಎತ್ತಿದರು.
ಮನೆ ಮನೆಗೆ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಜಲ ಜೀವನ್ ಮಿಷನ್ ಪೈಪ್‍ಲೈನ್ ಹೊಂಡವನ್ನು ಕೃಷಿ ಭೂಮಿ ಮಧ್ಯದಲ್ಲಿ ತೆಗೆದಿದ್ದರಿಂದ ಗದ್ದೆ ಉಳುಮೆ ಮಾಡುತ್ತಿದ್ದಾಗ ಪವರ್ ಟಿಲ್ಲರ್ ಹೊಂಡದಲ್ಲಿ ಸಿಕ್ಕಿ ಹಾಕಿಕೊಂಡಿದೆ ಎಂದು ರೈತರು ಆರೋಪಿಸಿದ್ದಾರೆ.ಯಂತ್ರದ ಪ್ರಮುಖ ಭಾಗಗಳು ತುಂಡಾಗಿದ್ದರಿಂದ ಯಂತ್ರದ ಮಾಲೀಕರಾದ ದೇವದಾಸ ಬಿಲ್ಲವ ನಾಯಕವಾಡಿ ಅವರಿಗೆ ಸುಮಾರು 28,000.ರೂ ನಷ್ಟ ಸಂಭವಿಸಿದೆ.ಪೈಪ್‍ಲೈನ್ ಕಾಮಗಾರಿ ವಹಿಸಿಕೊಂಡಿರುವ ಕಂಪೆನಿ ಪರಿಹಾರ ನೀಡಬೆಕೆಂದು ಯಂತ್ರದ ಮಾಲೀಕರು ಆಗ್ರಹಿಸಿದ್ದಾರೆ.ಹೊಸಾಡು ಗ್ರಾಮ ಪಂಚಾಯತ್ ಒಂದರಲ್ಲೆ ಜಲಜೀವನ್ ಮಿಷನ್‍ಗೆ ಸಂಬಧಿಸಿದ ಇದು ಮೂರನೇ ಪ್ರಕರಣವಾಗಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago