ಬೈಂದೂರು:ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಇಲ್ಲಿನ ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮದ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ,10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ.
ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು ಒಡೆಯುತ್ತಿರುವುದನ್ನು ನೋಡಿ ಮನೆಯವರು ಕೂಗಿದ ಬಳಿಕ ಕಳ್ಳರು ಪರಾರಿಯಾಗಿದ್ದಾರೆ.ಕೆಲವೇ ದಿನಗಳ ಹಿಂದೆ ಇದೇ ಭಾಗದಲ್ಲಿ ಸಂಜೆ ವೇಳೆ ಸುಮಾರು 35 ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯದ್ದ ಬೆನ್ನಲೇ ಈ ರೀತಿ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಶಿರೂರಿನಲ್ಲಿ ಹೆಚ್ಚುತ್ತಿರುವ ಗಾಂಜಾ ಪ್ರಕರಣ,ಅನಧೀಕೃತ ಚಟುವಟಿಕೆಗಳು ಇಂತಹ ಪ್ರಕರಣಕ್ಕೆ ಇನ್ನಷ್ಟು ದಾರಿ ಮಾಡಿಕೊಡುತ್ತಿದೆ.ಹೀಗಾಗಿ ಆರಕ್ಷಕ ಇಲಾಖೆ ಅನಧೀಕೃತ ಚಟುವಟಿಕೆಗೆ ಕಡಿವಾಣ ಹಾಕುವ ಜೊತೆಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂಬುವುದು ಸಾರ್ವಜನಿಕರ ಅಭಿಪ್ರಾಯಾವಗಿದೆ.ಬೈಂದೂರು ಆರಕ್ಷರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…